
ಗಯಾನ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಮಳೆಯ ಅಡಚಣೆಯಿಂದಾಗಿ ಪಂದ್ಯ ತಡವಾಗಿ ಆರಂಭವಾಗಿದ್ದು, ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾದರೂ ಅಚ್ಚರಿಯಿಲ್ಲ. ಇಂದು ಗೆಲ್ಲುವ ತಂಡವು ಜೂನ್ 29ರಂದು ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಪ್ರಶಸ್ತಿಗಾಗಿ ಕಾದಾಡಲಿದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರಿಯಾನ್ ಲಾರಾ ಸ್ಟೇಡಿಯಂ ಆತಿಥ್ಯ ವಹಿಸಿದೆ. ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ. ಇನ್ನೊಂದೆಡೆ ಭಾರತ ತಂಡದಲ್ಲೂ ಕೂಡಾ ಯಾವುದೇ ಬದಲಾವಣೆ ಮಾಡಿಲ್ಲ.
ಟಿ20 ವಿಶ್ವಕಪ್: ಇಂಗ್ಲೆಂಡ್ ಮೇಲೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ರೆಡಿ; ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
ಒಂದು ಕಡೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟೂರ್ನಿಯಲ್ಲಿ ಅಜೇಯ ನಾಗಾಲೋಟದೊಂದಿಗೆ ಸೆಮಿಫೈನಲ್ ಪ್ರವೇಶಿಸಿದ್ದು, ಇದೀಗ ಮತ್ತೊಂದು ಗೆಲುವು ಸಾಧಿಸಿ ಫೈನಲ್‌ಗೇರುವ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ಸೂಪರ್ 8 ಹಂತದಲ್ಲಿ ದಕ್ಷಿಣ ಆಫ್ರಿಕಾ ಎದುರು ಸೋತು ಆತಂಕಕ್ಕೊಳಗಾಗಿದ್ದ ಇಂಗ್ಲೆಂಡ್ ತಂಡವು ಆ ಬಳಿಕ ಎಚ್ಚೆತ್ತುಕೊಂಡು ಸೆಮೀಸ್ ಪ್ರವೇಶಿಸಿದೆ.
ಕಳೆದ ಬಾರಿ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಸೋತಿದ್ದ ಭಾರತ
ಭಾರತ ತಂಡ ಕಳೆದ ವರ್ಷ ಟೂರ್ನಿಯಲ್ಲೂ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮೀಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯ ಸೋಲನುಭವಿಸಿತ್ತು. ಈ ಬಾರಿ ಭಾರತ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್,
ಇಂಗ್ಲೆಂಡ್: ಬಟ್ಲರ್(ನಾಯಕ), ಸಾಲ್ಟ್, ಬೇರ್‌ಸ್ಟೋವ್, ಬ್ರೂಕ್, ಮೊಯೀನ್, ಲಿವಿಂಗ್‌ಸ್ಟೋನ್, ಕರ್ರನ್, ಜೊರ್ಡನ್, ಆರ್ಷರ್, ರಶೀದ್, ರೀಸ್ ಟಾಪ್ಲಿ.
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.