ಇಲ್ಲಿನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಸವಾಲಿನ ಗುರಿ ಬೆನ್ನತ್ತಿದ ಆಫ್ಘಾನಿಸ್ತಾನ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್‌ಗಳಾದ ರೆಹಮನುಲ್ಲಾ ಗುರ್ಬಾಜ್(11) ಹಾಗೂ ಹಜರತುಲ್ಲಾ ಝಝೈ(2) ಬಲಿ ಪಡೆಯುವಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾದರು.
ಬ್ರಿಡ್ಜ್‌ಟೌನ್ (ಬಾರ್ಬಡೊಸ್): ಸೂರ್ಯಕುಮಾರ್ ಯಾದವ್ ಸ್ಪೋಟಕ ಅರ್ಧಶತಕ ಹಾಗೂ ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಪ್ರದರ್ಶನದ ನೆರವಿನಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಪಂದ್ಯದಲ್ಲಿ ಆಫ್ಘಾನಿಸ್ತಾನ ಎದುರು 47 ರನ್ ಅಂತರದ ಸುಲಭ ಗೆಲುವು ದಾಖಲಿಸಿದೆ. ಗೆಲ್ಲಲು 182 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆಫ್ಘಾನಿಸ್ತಾನ ತಂಡವು 134 ರನ್‌ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಆಫ್ಘಾನಿಸ್ತಾನ ಎದುರು ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದ್ದು ಸತತ 9ನೇ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಸವಾಲಿನ ಗುರಿ ಬೆನ್ನತ್ತಿದ ಆಫ್ಘಾನಿಸ್ತಾನ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್‌ಗಳಾದ ರೆಹಮನುಲ್ಲಾ ಗುರ್ಬಾಜ್(11) ಹಾಗೂ ಹಜರತುಲ್ಲಾ ಝಝೈ(2) ಬಲಿ ಪಡೆಯುವಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾದರು. ಇನ್ನು ಇಬ್ರಾಹಿಂ ಜದ್ರಾನ್(8)ಗೆ ಅಕ್ಷರ್ ಪಟೇಲ್ ಪೆವಿಲಿಯನ್ ಹಾದಿ ತೋರಿಸಿದರು. ಆಫ್ಘಾನಿಸ್ತಾನ ತಂಡವು 23 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.
WT20 2024. India Won by 47 Run(s) https://t.co/gzppPXf843
— BCCI (@BCCI)undefined
ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಗುಲ್ಬದ್ದೀನ್ ನೈಬ್(17), ಅಝ್ಮತುಲ್ಲಾ ಓಮರ್‌ಝೈ(26) ಹಾಗೂ ನಜೀಬುಲ್ಲಾ ಜದ್ರಾನ್(19) ಕೊಂಚ ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಟಿ20 ವಿಶ್ವಕಪ್: ಮತ್ತೆ ಗುಡುಗಿದ ಸೂರ್ಯ, ಆಫ್ಘನ್ನರಿಗೆ ಕಠಿಣ ಗುರಿ ಕೊಟ್ಟ ಭಾರತ..!
ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 4 ಓವರ್‌ನಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರೆ, ಆರ್ಶದೀಪ್ ಸಿಂಗ್ 36 ರನ್ ನೀಡಿ 3 ಹಾಗೂ ಕುಲ್ದೀಪ್ ಯಾದವ್ 2 ಹಾಗೂ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಇದಕ್ಕೂ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಭಾರತ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೋಹಿತ್ ಶರ್ಮಾ 8 ರನ್ ಗಳಿಸಿ ವಿಕೆಟ್ ವಿಕೆಟ್ ಒಪ್ಪಿಸಿದರೆ. ರಿಷಭ್ ಪಂತ್ 20 ಹಾಗೂ ಕೊಹ್ಲಿ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್(53) ಆಕರ್ಷಕ ಅರ್ಧಶತಕ ಹಾಗೂ ಹಾರ್ದಿಕ್ ಪಾಂಡ್ಯ(32) ಚುರುಕಿನ ಬ್ಯಾಟಿಂಗ್ ನಡೆಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.