T20 World Cup 2024: ಐರ್ಲೆಂಡ್ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

By Naveen KodaseFirst Published Jun 5, 2024, 7:38 PM IST
Highlights

ಐರ್ಲೆಂಡ್ ಹಾಗೂ ಭಾರತ ನಡುವಿನ ಪಂದ್ಯಕ್ಕೆ ಇಲ್ಲಿನ ನಾಸೌ ಕೌಂಟಿ ಇಂಟರ್‌ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಭಾರತ ತಂಡವು ನಾಲ್ವರು ವೇಗಿಗಳು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಸೇರಿದಂತೆ ಕೆಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ನ್ಯೂಯಾರ್ಕ್‌: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಸಜ್ಜಾಗಿವೆ.

ಐರ್ಲೆಂಡ್ ಹಾಗೂ ಭಾರತ ನಡುವಿನ ಪಂದ್ಯಕ್ಕೆ ಇಲ್ಲಿನ ನಾಸೌ ಕೌಂಟಿ ಇಂಟರ್‌ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಭಾರತ ತಂಡವು ನಾಲ್ವರು ವೇಗಿಗಳು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಸೇರಿದಂತೆ ಕೆಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

It's toss time in New York! 🪙

India win the toss and opt to bowl first against Ireland. | | 📝: https://t.co/49mGr78Fjj pic.twitter.com/KANUkBhGA8

— ICC (@ICC)

Latest Videos

ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ ಈ 6 ಟೀಂ ಇಂಡಿಯಾ ಕ್ರಿಕೆಟರ್ಸ್..!

ಭಾರತ ಈ ಬಾರಿ ಟ್ರೋಫಿ ಗೆಲ್ಲುವ ಫೇವರಿಟ್‌ ಎನಿಸಿಕೊಂಡಿದ್ದು, ಎಲ್ಲಾ ವಿಭಾಗದಲ್ಲಿ ಬಲಿಷ್ಠವಾಗಿ ತೋರುತ್ತಿದೆ. 17 ವರ್ಷಗಳ ಬಳಿಕ ಟೀಂ ಇಂಡಿಯಾ ಮತ್ತೊಮ್ಮೆ ಟಿ20 ಟ್ರೋಫಿಗೆ ಮುತ್ತಿಕ್ಕಲು ಕನಸು ಕಾಣುತ್ತಿದೆ. 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ ಟಿ20 ಟ್ರೋಫಿ ಜಯಿಸಲು ಯಶಸ್ವಿಯಾಗಿಲ್ಲ.

ಉಭಯ ತಂಡಗಳ ಆಟಗಾರರ ಪಟ್ಟಿ

ಭಾರತ:

ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್.

ಐರ್ಲೆಂಡ್:

ಪೌಲ್ ಸ್ಟೆರ್ಲಿಂಗ್(ನಾಯಕ), ಲಾರ್ಕನ್ ಟಕರ್(ವಿಕೆಟ್ ಕೀಪರ್), ಆಂಡ್ರ್ಯೂ ಬಲ್ಬ್ರೈನ್, ಹ್ಯಾರಿ ಟೆಕ್ಟರ್, ಕುರ್ಟಿಸ್ ಕ್ಯಾಂಪರ್, ಜಾರ್ಜ್ ಡಾಕ್ರೆಲ್, ಗೆರಾತ್ ಡೆಲ್ನೆ, ಮಾರ್ಕ್ ಅಡೈರ್, ಬ್ಯಾರಿ ಮೆಕಾರ್ಥಿ, ಜೋಶ್ವಾ ಲಿಟ್ಲ್, ಬೆಂಜಮಿನ್ ವೈಟ್

ಪಂದ್ಯ: ರಾತ್ರಿ 8 ಗಂಟೆಗೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಹಾಟ್‌ಸ್ಟಾರ್‌.

click me!