ಒಂದು ಕಡೆ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ರಕ್ಷಣಾತ್ಮಕ ಆಟವಾಡಿದ ಆರಂಭಿಕ ಬ್ಯಾಟರ್ ಸ್ಟೀವನ್ ಟೇಲರ್ 30 ಎಸೆತಗಳನ್ನು ಎದುರಿಸಿ ಎರಡು ಸಿಕ್ಸರ್ ಸಹಿತ 24 ರನ್ ಬಾರಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.
ನ್ಯೂಯಾರ್ಕ್: ಎಡಗೈ ವೇಗಿ ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸಿದ ಆತಿಥೇಯ ಯುಎಸ್‌ಎ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಬಾರಿಸಿದ್ದು, ಬಲಾಢ್ಯ ಟೀಂ ಇಂಡಿಯಾಗೆ ಸಾಧಾರಣ ಗುರಿ ನೀಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಶ್ರೇಷ್ಠ ಬೌಲಿಂಗ್ ಪ್ರದರ್ಶನ ತೋರಿದ ಆರ್ಶದೀಪ್ ಸಿಂಗ್ 9 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಅಮೆರಿಕ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಯಶಸ್ವಿಯಾದರು. ಇನಿಂಗ್ಸ್‌ನ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಎಡಗೈ ವೇಗಿ ಆರ್ಶದೀಪ್ ಸಿಂಗ್ ಯುಎಸ್‌ಎ ತಂಡದ ಆರಂಭಿಕ ಬ್ಯಾಟರ್ ಜಹಾಂಗೀರ್ ಅವರನ್ನು ಎಲ್‌ಬಿ ಬಲೆಗೆ ಕೆಡಹುವಲ್ಲಿ ಯಶಸ್ವಿಯಾದರು. ಇನ್ನು ಆಂಡ್ರಿಸ್ ಗೌಸ್ ಅವರನ್ನು ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಆರ್ಶದೀಪ್ ಪೆವಿಲಿಯನ್ನಿಗಟ್ಟಿದರು. ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾದ ಅಮೆರಿಕ ತಂಡವು ಸಾಕಷ್ಟು ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಯಿತು. ಪರಿಣಾಮ ಮೊದಲ 6 ಓವರ್‌ಗಳ ಪವರ್‌ಪ್ಲೇನಲ್ಲಿ ಯುಎಸ್‌ಎ ತಂಡವು 2 ವಿಕೆಟ್ ನಷ್ಟಕ್ಕೆ ಕೇವಲ 18 ರನ್ ಗಳಿಸಲಷ್ಟೇ ಶಕ್ತವಾಯಿತು.
ಇನ್ನು ಎಂಟನೇ ಓವರ್‌ನಲ್ಲಿ ಯುಎಸ್‌ಎ ತಂಡದ ಅಪಾಯಕಾರಿ ಬ್ಯಾಟರ್ ಆರೋನ್ ಜೋನ್ಸ್(11) ಅವರನ್ನು ಬಲಿ ಪಡೆಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು. ಮೊದಲ 10 ಓವರ್ ಅಂತ್ಯದ ವೇಳೆಗೆ ಯುಎಸ್‌ಎ ತಂಡವು 3 ವಿಕೆಟ್ ಕಳೆದುಕೊಂಡು 42 ರನ್ ಗಳಿಸಲಷ್ಟೇ ಶಕ್ತವಾಯಿತು.
ಒಂದು ಕಡೆ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ರಕ್ಷಣಾತ್ಮಕ ಆಟವಾಡಿದ ಆರಂಭಿಕ ಬ್ಯಾಟರ್ ಸ್ಟೀವನ್ ಟೇಲರ್ 30 ಎಸೆತಗಳನ್ನು ಎದುರಿಸಿ ಎರಡು ಸಿಕ್ಸರ್ ಸಹಿತ 24 ರನ್ ಬಾರಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ಕುಮಾರ್ 23 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 27 ರನ್ ಸಿಡಿಸಿ ಆರ್ಶದೀಪ್ ಸಿಂಗ್‌ಗೆ ಮೂರನೇ ಬಲಿಯಾದರು. ಇನ್ನು ಕೋರಿ ಆಂಡರ್‌ಸನ್ 14 ಹಾಗೂ ಹರ್ಮಿತ್ ಸಿಂಗ್ 10 ರನ್ ಸಿಡಿಸಿ ತಂಡಕ್ಕೆ ಉಪಯುಕ್ತ ರನ್ ಕಾಣಿಕೆ ನೀಡಿದರು
ಆರ್ಶದೀಪ್ ಸಿಂಗ್ ಮಾರಕ ದಾಳಿ: ಮೊದಲ ಓವರ್‌ನಲ್ಲೇ 2 ವಿಕೆಟ್ ಕಬಳಿಸಿದ್ದ ಟೀಂ ಇಂಡಿಯಾ ಎಡಗೈ ವೇಗಿ ಆರ್ಶದೀಪ್ ಸಿಂಗ್, ಆ ಬಳಿಕವೂ ಶಿಸ್ತುಬದ್ದ ದಾಳಿ ನಡೆಸುವ ಮೂಲಕ ಯುಎಸ್‌ಎ ಬೌಲರ್‌ಗಳನ್ನು ಕಾಡಿದರು. ಆರ್ಶದೀಪ್ 4 ಓವರ್ ಬೌಲಿಂಗ್ ಮಾಡಿ ಕೇವಲ 9 ರನ್ ನೀಡಿ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಪರ ಶ್ರೇಷ್ಠ ಬೌಲಿಂಗ್ ಪ್ರದರ್ಶನ ತೋರಿದ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾದರು.