ದುಬೈ(ನ.14): T20 World cup 2021 ಟೂರ್ನಿಯ ಚಾಂಪಿಯನ್ ಯಾರು ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಕಳೆದ ಒಂದು ತಿಂಗಳಿನಿಂದ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ನ್ಯೂಜಿಲೆಂಡ್(New zealand) ಹಾಗೂ ಆಸ್ಟೇಲಿಯಾ(Australia) ಎಲ್ಲಾ ತಂಡಗಳನ್ನು ಮಣಿಸಿ ಫೈನಲ್(Final) ಪ್ರವೇಶಿಸಿದೆ. ಇದೀಗ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಇಂದಿನ ಪಂದ್ಯಕ್ಕೆ ಯಾರಿಗೆಲ್ಲಾ ಅವಕಾಶ ಸಿಗಲಿದೆ. ತಂಡದಲ್ಲಿ ಕೆಲ ಅನಿವಾರ್ಯ ಬದಲಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ಅನ್ನೋ ಕುತೂಹಲ ಇದೀಗ ಮನೆ ಮಾಡಿದೆ.
ಫೈನಲ್ ಪಂದ್ಯಕ್ಕೂ ಮುನ್ನವೇ ನ್ಯೂಜಿಲೆಂಡ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿತ್ತು. ಡೆವೋನ್ ಕಾನ್ವೋ ಬಲಗೈಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಫೈನಲ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ತಂಡ ಅನಿವಾರ್ಯವಾಗಿ ಬದಲಾವಣೆ ಮಾಡಲೇಬೇಕಿದೆ. ಡಿವೋನ್ ಕಾನ್ವೋ ಬದಲು ಟಿಮ್ ಸೈಫರ್ಟ್ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಟಿಮ್ ಸೈಫರ್ಟ್ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಮುಗ್ಗರಿಸಿತ್ತು.
ನ್ಯೂಜಿಲೆಂಡ್ ಸಂಭವನೀಯ ಪ್ಲೇಯಿಂಗ್ 11:
ಮಾರ್ಟಿನ್ ಗಪ್ಟಿಲ್, ಡರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಸೈಫರ್ಟ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆ್ಯಮ್ ಮಿಲ್ನೆ, ಟಿಮ್ ಸೌಥಿ, ಐಶ್ ಸೋಧಿ, ಟ್ರೆಂಟ್ ಬೋಲ್ಟ್
T20 World Cup: ಹೀಗಿತ್ತು ನೋಡಿ ಆಸ್ಟ್ರೇಲಿಯಾ ತಂಡದ ಫೈನಲ್‌ವರೆಗಿನ ಪಯಣ
ನ್ಯೂಜಿಲೆಂಡ್ ತಂಡಕ್ಕೆ ಮಾರ್ಟಿನ್ ಗಪ್ಟಿಲ್ ಹಾಗೂ ಇನ್ ಫಾರ್ಮ್ ಬ್ಯಾಟ್ಸ್‌ಮನ್ ಡರಿಲ್ ಮೆಚೆಲ್ ಆರಂಭ ನೀಡಲಿದ್ದಾರೆ. ಇನ್ನು ಗ್ಲೆನ್ ಫಿಲಿಪ್ಸ್ ಹಾಗೂ ಟಿಮ್ ಸೈಫರ್ಟ್ 3 ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಮಿಚೆಲ್ ಸ್ಯಾಂಟ್ನರ್ ಹಾಗೂ ಐಶ್ ಸೋಧಿ ಸ್ಪಿನ್ ಮೋಡಿ ಮಾಡಲು ರೆಡಿಯಾಗಿದ್ದಾರೆ. ಇತ್ತ ಆ್ಯಡಮ್ ಮಿಲ್ನೆ, ಟಿಮ್ ಸೌಥಿ ಹಾಗೂ ಟ್ರೆಂಟ್ ಬೋಲ್ಟ್ ಮೂವರ ವೇಗಿಗಳೊಂದಿಗೆ ನ್ಯೂಜಿಲೆಂಡ್ ಕಣಕ್ಕಿಳಿಯುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ಸಂಭವನೀಯ ಪ್ಲೇಯಿಂಗ್ 11
ಆ್ಯರೋನ್ ಫಿಂಚ್(ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಶ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಮಾಥ್ಯುವೇಡ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಮ್ ಜಂಪಾ, ಜೋಶ್ ಹೇಜಲ್‌ವುಡ್
ಆಸ್ಟ್ರೇಲಿಯಾ ತಂಡ ಹೆಚ್ಚು ಬ್ಯಾಲೆನ್ಸಿಂಗ್ ಆಗಿದೆ. 2010ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮುಗ್ಗರಿಸಿದ ಆಸ್ಟ್ರೇಲಿಯಾ ಇದೀಗ ಮತ್ತೆ ಫೈನಲ್ ಪ್ರವೇಶಿಸಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಅಚಲ ವಿಶ್ವಾಸದಲ್ಲಿದೆ. ಐಸಿಸಿ ನಾಕೌಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ಗಿಂತ ಉತ್ತಮ ಪ್ರದರ್ಶನ ನೀಡಿದೆ. ಕಳೆದ ನಾಲ್ಕು ಐಸಿಸಿ ನಾಕೌಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದವರ ಪಟ್ಟಿಯಲ್ಲಿ ಆಸಿಸ್ ಸ್ಪಿನ್ನರ್ ಆ್ಯಡಮ್ ಜಂಪಾ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಸ್ಪಿನ್ನರ್ ವಾವಿಂಡು ಹಸರಂಗಾ ನಂತರ ಸ್ಥಾನದಲ್ಲಿರುವ ಜಂಪಾ, ಇದೀಗ ನ್ಯೂಜಿಲೆಂಡ್ ವಿರುದ್ದ ಫೈನಲ್ ಪಂದ್ಯದಲ್ಲೂ ಮೋಡಿ ಮಾಡಲು ರೆಡಿಯಾಗಿದ್ದಾರೆ.
T20 World Cup Final: ಹೀಗಿತ್ತು ನೋಡಿ ನ್ಯೂಜಿಲೆಂಡ್ ತಂಡದ ಫೈನಲ್‌ವರೆಗಿನ ಪಯಣ
ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನೇ ಬುಗ್ಗು ಬಡಿದಿರುವ ಆಸ್ಟೇಲಿಯಾ ತಂಡದ ಆತ್ಮವಿಶ್ವಾಸ ಹೆಚ್ಚಿದೆ. ಟೂರ್ನಿಯಲ್ಲಿ ಪಾಕಿಸ್ತಾನ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ಅದೇ ಬಲಿಷ್ಠ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿತ್ತು.