T20 World Cup ಎಂ ಎಸ್ ಧೋನಿ ಟೀಂ ಇಂಡಿಯಾದ ಮುಂದಿನ ಪ್ರಧಾನ ಕೋಚ್‌?

Suvarna News   | Asianet News
Published : Sep 09, 2021, 08:31 AM IST
T20 World Cup ಎಂ ಎಸ್ ಧೋನಿ ಟೀಂ ಇಂಡಿಯಾದ ಮುಂದಿನ ಪ್ರಧಾನ ಕೋಚ್‌?

ಸಾರಾಂಶ

* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತೀಯ ಕ್ರಿಕೆಟ್ ತಂಡ ಪ್ರಕಟ * ಮಹೇಂದ್ರ ಸಿಂಗ್ ಧೋನಿಗೆ ಒಲಿದ ಮೆಂಟರ್‌ ಹುದ್ದೆ * ಮುಂಬರುವ ದಿನಗಳಲ್ಲಿ ಧೋನಿ ಟೀಂ ಇಂಡಿಯಾ ಕೋಚ್ ಆಗುವ ಸಾಧ್ಯತೆ

ನವದೆಹಲಿ(ಸೆ.09): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಎಂ.ಎಸ್‌.ಧೋನಿಯನ್ನು ಭಾರತ ಕ್ರಿಕೆಟ್ ತಂಡದ ತಂಡದ ಮೆಂಟರ್‌(ಸಲಹೆಗಾರ) ಆಗಿ ನೇಮಕ ಮಾಡಿರುವುದು ವಿಶ್ವ ಕ್ರಿಕೆಟ್‌ಗೆ ಅಚ್ಚರಿ ಮೂಡಿಸಿದೆ. ಈ ಆಯ್ಕೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ. 

ವಿಶ್ವದ ಶ್ರೇಷ್ಠ ನಾಯಕರಲ್ಲಿ ಒಬ್ಬರೆನಿಸಿರುವ ಧೋನಿ ಉಪಸ್ಥಿತಿ ತಂಡಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ. ಧೋನಿ ಈಗಾಗಲೇ ಯುಎಇನಲ್ಲಿದ್ದು ಐಪಿಎಲ್‌ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮುನ್ನಡೆಸಲಿರುವ ಧೋನಿಗೆ ಅಲ್ಲಿನ ಪಿಚ್‌, ವಾತಾವರಣದ ಬಗ್ಗೆ ಸಂಪೂರ್ಣ ಮಾಹಿತಿ ಇರಲಿದೆ. ಹೀಗಾಗಿ ತಂಡದ ಆಯ್ಕೆ ಸೇರಿ ನಿರ್ಣಾಯಕ ನಿರ್ಧಾರಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಧೋನಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸ್ವತಃ ವಿರಾಟ್‌ ಕೊಹ್ಲಿ ಅನೇಕ ಸನ್ನಿವೇಶಗಳಲ್ಲಿ ಧೋನಿಯ ಸಲಹೆ ಪಡೆದಿರುವುದನ್ನು ನೋಡಿದ್ದೇವೆ. ಹೀಗಾಗಿ, ಧೋನಿ ನೇಮಕದ ಹಿಂದೆ ಕೊಹ್ಲಿಯ ಪಾತ್ರ ಇದ್ದೇ ಇರಲಿದೆ.

ಟಿ20 ವಿಶ್ವಕಪ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; ಎಂ.ಎಸ್. ಧೋನಿ ಮೆಂಟರ್!

ಇದೆಲ್ಲಕ್ಕಿಂತ ಮುಖ್ಯವಾಗಿ ಟಿ20 ವಿಶ್ವಕಪ್‌ ಬಳಿಕ ತಂಡದ ಪ್ರಧಾನ ಕೋಚ್‌ ಆಗಿ ರವಿಶಾಸ್ತ್ರಿ ಮುಂದುವರಿಯುವುದು ಅನುಮಾನ ಎಂದು ಈ ಹಿಂದೆಯೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹೀಗಾಗಿ, ಶಾಸ್ತ್ರಿ ಬಳಿಕ ಧೋನಿ ಭಾರತ ತಂಡದ ಪ್ರಧಾನ ಕೋಚ್‌ ಆಗಿ ನೇಮಕಗೊಳ್ಳಬಹುದು ಎನ್ನುವ ಚರ್ಚೆಯೂ ಸಾಮಾಜಿಕ ತಾಣಗಳಲ್ಲಿ ಜೋರಾಗಿ ನಡೆಯುತ್ತಿದೆ. ಕೋಚ್‌ ಹುದ್ದೆಯ ಮೊದಲ ಭಾಗವಾಗಿ ಧೋನಿಯನ್ನು ಈಗ ಮೆಂಟರ್‌ ಆಗಿ ನೇಮಿಸಲಾಗಿದೆ ಎಂದು ಹಲವರು ಅಭಿಪ್ರಾಯಿಸಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!