ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್, ಕಾಪುವಿನ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಹಲವು ವಿಚಾರಗಳನ್ನು ಮನಬಿಚ್ಚಿ ಮಾತನಾಡಿದ್ದಾರೆ.
ಕಾಪು: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸೂರ್ಯಕುಮಾರ್ ಯಾದವ್ ಇಂದು ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ ದೇವಿಯ ದರ್ಶನ ಪಡೆದರು. ಈ ವೇಳೆ ಮಾಧ್ಯಮದವರ ಜತೆ ಮನಬಿಚ್ಚಿ ಮಾತನಾಡಿದ ಸೂರ್ಯಕುಮಾರ್ ಯಾದವ್, ತಾವಿಲ್ಲಿ ಸೆಲಿಬ್ರಿಟಿಯಾಗಿ ಬಂದಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ ಎಂದು ಹೇಳಿದ್ದಾರೆ.
'ಕಾಪು ಮಾರಿಯಮ್ಮನ ದರ್ಶನ ಮಾಡಿದ್ದು ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಇಲ್ಲಿ ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯಿತು. ದೇವಸ್ಥಾನದ ಜೋರ್ಣೋದ್ಧಾರ ಸಂದರ್ಭದಲ್ಲಿ ಇಲ್ಲಿಗೆ ಬರಬೇಕು ಎನ್ನುವ ಇಚ್ಛೆ ಇದೆ" ಎಂದು ಸೂರ್ಯ ಹೇಳಿದ್ದಾರೆ.
undefined
ಅಲಿಬಾಗ್‌ನಲ್ಲಿರುವ ಐಶಾರಾಮಿ ಮನೆಯ ವಿಡಿಯೋ ಹಂಚಿಕೊಂಡ ವಿರಾಟ್..! ಹೇಗಿದೆ ನೋಡಿ ಕಿಂಗ್ ಕೊಹ್ಲಿ ಮನೆ
ಕಾಪುದ ಅಮ್ಮ(ಕಾಪುವಿನ ತಾಯಿ) ಎಂದು ತುಳುವಿನಲ್ಲಿಯೇ ಮಾತು ಆರಂಭಿಸಿದ ಸೂರ್ಯಕುಮಾರ್ ಯಾದವ್, ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಇಲ್ಲಿಗೆ ಬಂದಿದ್ದೇನೆ. ನಾನು ಸೆಲಿಬ್ರಿಟಿಯಾಗಿ ಇಲ್ಲಿಗೆ ಬಂದಿಲ್ಲ. ನಾನೊಬ್ಬ ಸೆಲಿಬ್ರಿಟಿ ಎನ್ನುವ ಆಲೋಚನೆ ಕೂಡಾ ನನಗೆ ಇಲ್ಲಿ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಿದೆ. ವಿಶ್ವಕಪ್ ಇಡೀ ಜೀವನವಲ್ಲ. ಅದು ಜೀವನದ ಒಂದು ಭಾಗ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ವಿಸ್ಪೋಟಕ ಬ್ಯಾಟರ್ ಸೂರ್ಯ ಹೇಳಿದ್ದಾರೆ.
ಟೀಂ ಇಂಡಿಯಾ ನಾಯಕನಾಗಿ ಮತ್ತೆ ಕಾಪುವಿಗೆ ಬನ್ನಿ ಎನ್ನುವ ಅರ್ಚಕರ ಪ್ರಾರ್ಥನೆಯ ಬಗ್ಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, "ತಂಡದ ನಾಯಕನಾಗುವುದು ನಮ್ಮ ಕೈಯಲ್ಲಿ ಇಲ್ಲ. ಆದರೆ ದೇಶಕ್ಕಾಗಿ ಆಡುವುದಷ್ಟೇ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಭೇಟಿ ನೀಡಿದ್ದರಿಂದ ಮನಸ್ಸಿಗೆ ಶಾಂತಿ ಸಿಕ್ಕಿದೆ ಎಂದು ಮಿಸ್ಟರ್ 360 ಖ್ಯಾತಿಯ ಸೂರ್ಯ ಹೇಳಿದ್ದಾರೆ.
ಮಾರಿಗುಡಿಯಲ್ಲಿ ಗ್ರೇಟ್ ಕ್ಯಾಚ್ ಹಿಡಿದು ವಿಶ್ವಕಪ್ ಗೆಲ್ಲಿಸಿದ, ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್
ಇನ್ನು ದಕ್ಷಿಣ ಆಫ್ರಿಕಾ ಎದುರಿನ ಫೈನಲ್ ಪಂದ್ಯದಲ್ಲಿ ಹಿಡಿದ ಕ್ಯಾಚ್ ಕುರಿತಾಗಿ ಚರ್ಚೆ ನಡೆಯುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸೂರ್ಯ, "ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ. ಪ್ರಪಂಚದ ಎಲ್ಲಾ ಜನರನ್ನು ಖುಷಿ ಪಡಿಸಲು ಸಾಧ್ಯವಿಲ್ಲ. ದೇವರ ದಯೆಯಿಂದ ನಾನು ಅಲ್ಲಿದ್ದೆ. ಅಂತಹ ಅದ್ಭುತ ಕ್ಯಾಚ್ ಹಿಡಿಯಲು ಸಾಧ್ಯವಾಯಿತು ಎಂದು ಸೂರ್ಯ ಆ ಕ್ಷಣವನ್ನು ಮತ್ತೊಮ್ಮೆ ಮೆಲುಕು ಹಾಕಿದ್ದಾರೆ.