* ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ದಿನಗಣನೆ ಆರಂಭ
* ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭ
* ಇಂಗ್ಲೆಂಡ್ ಎದುರಿನ 4ನೇ ಟೆಸ್ಟ್ ಮುಕ್ತಾಯದ ಬಳಿಕ ಭಾರತ ಕ್ರಿಕೆಟ್ ತಂಡ ಪ್ರಕಟ
ದುಬೈ(ಸೆ.03): ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಮುಕ್ತಾಯಗೊಂಡ ಬಳಿಕ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ಪ್ರಕಟಿಸಲು ಸೆಪ್ಟೆಂಬರ್ 10 ಕೊನೆ ದಿನವಾಗಿದೆ. ಸದ್ಯ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗಳು ಟಿ20 ವಿಶ್ವಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿವೆ. ಓವಲ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸೆಪ್ಟೆಂಬರ್ 6ರಂದು ಮುಕ್ತಾಯಗೊಳ್ಳಲಿದೆ. ಆ ಬಳಿಕ ಸಭೆ ಸೇರಲಿರುವ ಆಯ್ಕೆ ಸಮಿತಿಯು ವಿಶ್ವಕಪ್‌ಗೆ ತಂಡದ ಸದಸ್ಯರನ್ನು ಅಂತಿಮಗೊಳಿಸಲಿದೆ.
undefined
ICC T20 World Cup ಟೂರ್ನಿ ಟೀಂ ಇಂಡಿಯಾ ವೇಳಾಪಟ್ಟಿ ಹೀಗಿದೆ ನೋಡಿ..!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 17ರಿಂದ ಆರಂಭವಾಗಲಿದೆ. ಮೊದಲ ಹಂತದಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಇದಾದ ಬಳಿಕ ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರಿಂದ ಆರಂಭವಾಗಲಿದೆ. ದುಬೈಯಲ್ಲಿ ಅ.24ರಂದು ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾವನ್ನು ಎದುರಿಸಲಿದೆ. ಫೈನಲ್ ಪಂದ್ಯವು ನವೆಂಬರ್ 14ರಂದು ನಡೆಯಲಿದೆ.