* ಟೀಂ ಇಂಡಿಯಾ ಎದುರಿನ ಪಂದ್ಯಕ್ಕೆ 12 ಆಟಗಾರರ ಪಾಕ್ ತಂಡ ಪ್ರಕಟ
* ಅನುಭವಿ ಆಟಗಾರರಾದ ಶೋಯೆಬ್ ಮಲಿಕ್, ಮೊಹಮ್ಮದ್ ಹಫೀಜ್‌ಗೆ ಸ್ಥಾನ
* ಅಕ್ಟೋಬರ್ 24ರಂದು ದುಬೈನಲ್ಲಿ ನಡೆಯಲಿರುವ ಪಂದ್ಯ
ದುಬೈ(ಅ.23): 7ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಹೈವೋಲ್ಟೇಜ್ ಪಂದ್ಯಗಳಲ್ಲಿ ಒಂದು ಎನಿಸಿರುವ ಭಾರತ (Indian Cricket Team) ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 24ರಂದು ಆರಂಭವಾಗಲಿರುವ ಭಾರತ ವಿರುದ್ದ ಪಂದ್ಯಕ್ಕೆ ಶನಿವಾರ 12 ಆಟಗಾರರನ್ನೊಳಗೊಂಡ ಪಾಕಿಸ್ತಾನ ತಂಡ ಪ್ರಕಟವಾಗಿದೆ.
ಹೌದು, ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ (Dubai International Stadium) ನಡೆಯಲಿರುವ ಈ ಪಂದ್ಯಕ್ಕೆ ನಿರೀಕ್ಷೆಯಂತೆಯೇ ಬಾಬರ್ ಅಜಂ (Babar Azam) ತಂಡವನ್ನು ಮುನ್ನಡೆಸಲಿದ್ದಾರೆ. ಸಾಕಷ್ಟು ಅಳೆದು-ತೂಗಿ ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ 12 ಆಟಗಾರರನ್ನೊಳಗೊಂಡ ಪಾಕಿಸ್ತಾನ ತಂಡ ಪ್ರಕಟವಾಗಿದೆ. ಪಾಕಿಸ್ತಾನದ ಅನುಭವಿ ಆಲ್ರೌಂಡರ್‌ಗಳಾದ ಶೋಯೆಬ್ ಮಲಿಕ್ (Shoaib Malik) ಹಾಗೂ ಮೊಹಮ್ಮದ್ ಹಫೀಜ್‌ಗೆ ತಂಡದಲ್ಲಿ ಮಣೆ ಹಾಕಲಾಗಿದೆ. ಬಹುತೇಕ ಈ ಇಬ್ಬರು ಆಟಗಾರರು ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
Pakistan open T20 World Cup campaign on Sunday
More details ➡️ https://t.co/jNJ0nfEIOg |
undefined
ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಯಲು ಬಿಸಿಸಿಐನಿಂದ ಒತ್ತಡವಿತ್ತೇ..?
ಮೈದಾನದಲ್ಲಿ ಬದ್ದವೈರಿಗಳೆಂದು ಗುರುತಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ. 2007ರಿಂದ ಇಲ್ಲಿಯವರೆಗೆ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನೆರೆಯ ಪಾಕಿಸ್ತಾನ ತಂಡದ ಎದುರು ಟೀಂ ಇಂಡಿಯಾ ಆಡಿದ ಎಲ್ಲಾ ಪಂದ್ಯಗಳಲ್ಲೂ 5-0 ಅಂತರದಲ್ಲಿ ಗೆಲುವಿನ ನಗೆ ಬೀರಿದೆ.
T20 World Cup 2021:ಹರಿದಾಡುತ್ತಿದೆ ಇಂಡೋ ಪಾಕ್ ಪಂದ್ಯದ ವೈರಲ್ ಮೆಮ್ಸ್!
ಇದೀಗ ಗ್ರೂಪ್‌ನ ಪಂದ್ಯದಲ್ಲಿ ಸೆಮಿಫೈನಲ್‌ಗೇರಲು ಭಾರತ, ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ (New Zealand Cricket Team) ನಡುವೆ ಸಾಕಷ್ಟು ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ. ಇದೇ ಗುಂಪಿನಲ್ಲಿ ಆಫ್ಘಾನಿಸ್ತಾನ, ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ತಂಡಗಳು ಸ್ಥಾನ ಪಡೆದಿವೆ. ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು (Pakistan Cricket Team) ಭಾರತ ತಂಡವನ್ನು ಮಣಿಸುವ ಮೂಲಕ ಹಳೆಯ ಎಲ್ಲಾ ಕಹಿ ನೆನಪುಗಳನ್ನು ಅಳಿಸಿ ಹಾಕಲು ಎದುರು ನೋಡುತ್ತಿದೆ. ಏಕದಿನ ಹಾಗೂ ಟಿ20 ವಿಶ್ವಕಪ್ ಸೇರಿದಂತೆ ಉಭಯ ತಂಡಗಳು ಒಟ್ಟು 12 ಬಾರಿ ಮುಖಾಮುಖಿಯಾಗಿದ್ದು, 12 ಪಂದ್ಯಗಳಲ್ಲೂ ಪಾಕಿಸ್ತಾನ ವಿರುದ್ದ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ.
ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಾಕ್ ವಿರುದ್ದದ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಆದರೆ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ ತಂಡವು ಸಮತೋಲನದಿಂದ ಕೂಡಿರಲಿದೆ ಎಂದು ಹೇಳಿದ್ದಾರೆ.
ಭಾರತ ವಿರುದ್ದದ ಪಂದ್ಯಕ್ಕೆ 12 ಆಟಗಾರರನ್ನೊಳಗೊಂಡ ಪಾಕಿಸ್ತಾನ ತಂಡ ಹೀಗಿದೆ ನೋಡಿ
ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖಾರ್ ಜಮಾನ್, ಹೈದರ್ ಅಲಿ, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶದಾಬ್ ಖಾನ್ (ಉಪನಾಯಕ), ಇಮಾದ್ ವಾಸೀಂ, ಹಸನ್ ಅಲಿ, ಶಹೀನ್ ಶಾ ಅಫ್ರಿದಿ, ಹ್ಯಾರಿಸ್ ರವೂಫ್.
ದಿನಾಂಕ: ಅಕ್ಟೋಬರ್ 24
ಪಂದ್ಯ ಆರಂಭ: ಸಂಜೆ 7.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್