T20 World Cup ಇಂಡೋ-ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿ..! ಟೀಂ ಇಂಡಿಯಾ ಪಾಳಯದಲ್ಲಿ ಆತಂಕ

By Naveen KodaseFirst Published Nov 2, 2022, 4:27 PM IST
Highlights

ಭಾರತ-ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ವರುಣರಾಯ ಅಡ್ಡಿ
ಅಡಿಲೇಡ್ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯ
7 ಓವರ್‌ ಅಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 66 ರನ್ ಗಳಿಸಿರುವ ಬಾಂಗ್ಲಾದೇಶ

ಅಡಿಲೇಡ್‌(ನ.02): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಭಾರತ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ಸ್ಪೋಟಕ ಆರಂಭವನ್ನು ಪಡೆದಿದೆ. ಇದರ ಬೆನ್ನಲ್ಲೇ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು, ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

ಹೌದು, ಭಾರತ ನೀಡಿದ್ದ 185 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಬ್ಯಾಟರ್ ಲಿಟನ್ ದಾಸ್ ಸ್ಪೋಟಕ ಆರಂಭವನ್ನೇ ಒದಗಿಸಿಕೊಟ್ಟಿದ್ದಾರೆ. ಭುವನೇಶ್ವರ್ ಕುಮಾರ್, ಆರ್ಶದೀಪ್ ಸಿಂಗ್ ಹಾಗೂ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಲಿಟನ್ ದಾಸ್ ಕೇವಲ 21 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.  ಸದ್ಯ ಲಿಟನ್ ದಾಸ್ ಕೇವಲ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ನಜ್ಮುಲ್ ಹೊಸೈನ್ ಶಾಂಟೋ 16 ಎಸೆತಗಳನ್ನು ಎದುರಿಸಿ 7 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

T20 World Cup: ವಿರಾಟ್, ರಾಹುಲ್ ಆರ್ಭಟ, ಬಾಂಗ್ಲಾ ಪಾಳಯದಲ್ಲಿ ಸಂಕಟ..!

Bangladesh's charge halted by rain in Adelaide ⛈

They are ahead by 17 runs on DLS at this stage! | | 📝: https://t.co/vDRjKeeGvf pic.twitter.com/0okTJ01POZ

— ICC (@ICC)

ಟೀಂ ಇಂಡಿಯಾ ಪಾಳಯದಲ್ಲಿ ಆತಂಕ: ಸೆಮೀಸ್ ಪ್ರವೇಶಿಸುವ ದೃಷ್ಟಿಯಿಂದ ಟೀಂ ಇಂಡಯಾ ಪಾಲಿಗೆ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ. ಆದರೆ ಇದೀಗ ಬಾಂಗ್ಲಾದೇಶ ತಂಡವು 7 ಓವರ್ ಮುಕ್ತಾಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 66 ರನ್ ಬಾರಿಸಿದೆ. ಇದರ ಬೆನ್ನಲ್ಲೇ ಮಳೆ ಅಡ್ಡಿ ಪಡಿಸಿದೆ. ಒಂದು ವೇಳೆ ಮಳೆಯಿಂದ ಈ ಪಂದ್ಯ ಇಲ್ಲಿಗೆ ಸ್ಥಗಿತಗೊಂಡರೆ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾದೇಶ ತಂಡವು 17 ರನ್‌ಗಳ ಗೆಲುವು ದಾಖಲಿಸಿದೆ. ಹೀಗಾಗಿ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

ಒಂದು ವೇಳೆ ಓವರ್ ಕಡಿತಗೊಂಡರೆ ಬಾಂಗ್ಲಾದೇಶಕ್ಕೆ ಸಿಗಬಹುದಾದದ ಗುರಿ

19 overs: 177
17 overs: 160
15 overs: 142
12 overs: 112
10 overs: 89

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಕೆ ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬಾರಿಸಿದ ಸ್ಪೋಟಕ ಅರ್ಧಶತಕಗಳ ನೆರವಿನಿಂದ 6 ವಿಕೆಟ್ ಕಳೆದುಕೊಂಡು 184 ರನ್ ಬಾರಿಸಿದೆ. ಆರಂಭದಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತಾದರೂ, ಬಳಿಕ ಕೆ ಎಲ್ ರಾಹುಲ್(50), ವಿರಾಟ್ ಕೊಹ್ಲಿ(64*) ಹಾಗೂ ಸೂರ್ಯಕುಮಾರ್ ಯಾದವ್ ಸಮಯೋಚಿತ 30 ರನ್ ಬಾರಿಸುವ ಮೂಲಕ ತಂಡಕ್ಕೆ ಉಪಯುಕ್ತ ರನ್ ಕಾಣಿಕೆ ನೀಡಿದರು.

click me!