ಸೋಲಿನ ಆಘಾತಕ್ಕೆ ಕಣ್ಣೀರಿಟ್ಟ ನಾಯಕ ರೋಹಿತ್, ಸಮಾಧಾನ ಪಡಿಸಿದ ದ್ರಾವಿಡ್!

By Suvarna NewsFirst Published Nov 10, 2022, 6:46 PM IST
Highlights

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲುವಿನ ಕನಸಿನೊಂದಿಗೆ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ ಇದೀಗ ಬೈರಿಗೈಯಲ್ಲಿ ವಾಪಾಸ್ಸಾಗುತ್ತಿದೆ. ಈ ಸೋಲಿನ ನೋವು ಅಭಿಮಾನಿಗಳಿಗೆ ಮಾತ್ರವಲ್ಲ, ನಾಯಕ ರೋಹಿತ್ ಶರ್ಮಾಗೂ  ಅತೀಯಾಗಿ ತಟ್ಟಿದೆ. ಪೆವಿಲಿಯನ್‌ಗೆ ಮರಳಿದ ರೋಹಿತ್ ಕಣ್ಮೀರಿಟ್ಟಿದ್ದಾರೆ. ದ್ರಾವಿಡ್ ಸಮಾಧಾನಪಡಿಸಿದರೂ ರೋಹಿತ್‌ಗೆ ದುಃಖ ತಡೆಯಲು ಸಾಧ್ಯವಾಗಿಲ್ಲ.
 

ಆಡಿಲೇಡ್(ನ.10): ಟಿ20 ವಿಶ್ವಕಪ್ ಟೂರ್ನಿಗೆ ಸಾಕಷ್ಟು ತಯಾರಿ ಮಾಡಿಕೊಂಡು ಟೀಂ ಇಂಡಿಯಾ ತೆರಳಿತ್ತು. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ದಾಖಲಿಸಿ ಟೀಂ ಇಂಡಿಯಾ ಭಾರತೀಯರ ವಿಶ್ವಾಸ ಇಮ್ಮಡಿಗೊಳಿಸಿತ್ತು. ಸೂಪರ್ 12 ಹಂತದಲ್ಲಿ ಸೌತ್ ಆಫ್ರಿಕಾ ವಿರುದ್ಧದ ಸೋಲುಂಡರೂ ಯಾವುದೇ ಸಂಕಷ್ಟವಿಲ್ಲದೆ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಸಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡಿತ್ತು. ಈ ಸೋಲು ಅಭಿಮಾನಿಗಳಿಗೆ ತೀವ್ರ ನಿರಾಸೆ ತಂದಿದೆ. ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟೀಂ ಇಂಡಿಯಾ ಕ್ರಿಕೆಟಿಗರಿಗೂ ಈ ಸೋಲು ಆಘಾತ ತಂದಿದೆ. ಪೆವಿಲಿಯನ್‌ನಲ್ಲಿ ನಾಯಕ ರೋಹಿತ್ ಶರ್ಮಾ ಕಣ್ಣೀರಿಟ್ಟಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಸಮಾಧಾನ ಪಡಿಸಿದರೂ ರೋಹಿತ್‍ಗೆ ದುಃಖ ತಡೆಯಲು ಸಾಧ್ಯವಾಗಲಿಲ್ಲ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಹೀಗಾಗಿ 168 ರನ್ ಸಾಧಾರಣ ಮೊತ್ತ ದಾಖಲಿಸಿತ್ತು. ಇತ್ತ ಬೌಲಿಂಗ್‌ನಲ್ಲೂ ಟೀಂ ಇಂಡಿಯಾ ನೀರಸ ಪ್ರದರ್ಶನ ನೀಡಿತು. ಇದರ ಪರಿಣಾಮ ಇಂಗ್ಲೆಂಡ್ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿ ಪಂದ್ಯ ಗೆದ್ದುಕೊಂಡಿತು. 

ಟೀಂ ಇಂಡಿಯಾಗೆ ಚೋಕರ್ಸ್ ಪಟ್ಟ, ಮಿಸ್ ಯು ಧೋನಿ ಎಂದ ಭಾರತ!

ಸೋಲಿನ ಬಳಿಕ ಪೆವಿಲಿಯನ್‌ಗೆ ಆಗಮಿಸಿದ ರೋಹಿತ್ ಶರ್ಮಾ ನೋವಿನಿಂದಲೇ ಯಾರ ಜೊತೆಗೂ ಮಾತನಾಡಿಲ್ಲ. ಅತೀವ ದುಃಖ ತಡೆಯಲಾಗದೇ ಕಣ್ಣೀರಿಟ್ಟರು. ಆದರೆ ಕ್ಯಾಮಾರ ಕಣ್ಮಿಗೆ ಬೀಳದಂತೆ ಕೆಳಕ್ಕೆ ಮುಖ ಮಾಡಿದರು. ಇತ್ತ ರಾಹುಲ್ ದ್ರಾವಿಡ್ ಸಮಾಧಾನಪಡಿಸಿದರೂ ರೋಹಿತ್‌ಗೆ ದುಃಖ ತಡೆಯಲು ಸಾಧ್ಯವಾಗಲಿಲ್ಲ. 

 

pic.twitter.com/UJFyXywED3

— Guess Karo (@KuchNahiUkhada)

 

ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಗೆಲುವಿನ ನಿರೀಕ್ಷೆಯೊಂದಿಗೆ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ನಾಡಿಗೆ ಕಾಲಿಟ್ಟದ್ದರು. 2013ರ ಚಾಪಿಯನ್ಸ್ ಟ್ರೋಫಿ ಬಳಿಕ ಟೀಂ ಇಂಡಿಯಾ ಇದುವರೆಗೆ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಇತ್ತ ಇತ್ತೀಚೆಗೆ ನಡೆದ ಏಷ್ಯಾಕಪ್ ಟೂರ್ನಿಯಲ್ಲೂ ನೀರಸ ಪ್ರದರ್ಶನ ನೀಡಿ ಹೊರಬಿದ್ದಿತ್ತು. ಪ್ರಮುಖ ಟೂರ್ನಿಗಳಲ್ಲಿ ಭಾರತ ಹೆಚ್ಚೆಂದರೆ ಸಮಿಫೈನಲ್ ಹಂತ ಪ್ರವೇಶಿಸಿ ಹೊರಬೀಳುತ್ತಿದೆ. ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಟ್ರೋಫಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. 5 ಬಾರಿ ಐಪಿಎಲ್ ಟ್ರೋಫಿ ಗೆದ್ದ ರೋಹಿತ್‌ಗೆ ಟಿ20 ವಿಶ್ವಕಪ್ ಟ್ರೋಫಿ ತರುವುದು ಕಷ್ಟದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟಿದ್ದರು. 

T20 World cup ರಾಹುಲ್ ಕಳಪೆ ಪ್ರದರ್ಶನಕ್ಕೆ ಅಥಿಯಾ ಶೆಟ್ಟಿ ಟ್ರೋಲ್!

ಇಂಗ್ಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಕನಿಷ್ಠ ಹೋರಾಟ ನೀಡಿದ ಸೋಲು ಕಂಡಿದೆ. ಇದು ಮತ್ತೂ ಆಘಾತ ತಂದಿದೆ. ಸಾಮಾಜಿಕ ಜಾಲತಾಣಧಲ್ಲಿ ಟೀಂ ಇಂಡಿಯಾ ಹಾಗೂ ಕ್ರಿಕೆಟಿಗರನ್ನು ಹಿಗ್ಗಾ ಮುಗ್ಗ ಟ್ರೋಲ್ ಮಾಡಲಾಗುತ್ತದೆ. ಚೋಕರ್ಸ್, ಬಾಯ್ಕಾಟ್ ಐಪಿಎಲ್, ರೋಹಿತ್ ನಾಯಕತ್ವ, ಟೀಂ ಇಂಡಿಯಾ ಕಳಪೆ ಪ್ರದರ್ಶನ ಸೇರಿದಂತೆ ಹಲವು ವಿಚಾರಗಳು ಟ್ರೆಂಡ್ ಆಗಿವೆ. 

click me!