ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಟಿ20 ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಅಡಿಲೇಡ್(ಅ.26): ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಆಸ್ಪ್ರೇಲಿಯಾ ಟಿ20 ತಂಡಕ್ಕೆ ಮರಳಿದ್ದಾರೆ. ಚೆಂಡು ವಿರೂಪ ಪ್ರಕರಣದಲ್ಲಿ 1 ವರ್ಷ ನಿಷೇಧಕ್ಕೊಳಗಾಗಿದ್ದ ಈ ಇಬ್ಬರು ಆ್ಯಷಸ್ ಸರಣಿಗಾಗಿ ಟೆಸ್ಟ್ ತಂಡಕ್ಕೆ ವಾಪಸಾಗಿದ್ದರು. ಏಕದಿನ ತಂಡದಲ್ಲೂ ಆಡಿದ್ದರು. ಇದೀಗ ಮೊದಲ ಬಾರಿಗೆ ಟಿ20 ತಂಡದಲ್ಲೂ ಸ್ಥಾನ ಸಿಕ್ಕಿದೆ.
Get all the latest news from the Aussie camp ahead of the first T20 on Sunday pic.twitter.com/r6pSQHHnI6
— cricket.com.au (@cricketcomau)ಶ್ರೀಲಂಕ ವಿರುದ್ಧ ಅ.30ರಿಂದ ಆರಂಭಗೊಳ್ಳಲಿರುವ 3 ಪಂದ್ಯಗಳ ಸರಣಿಯಲ್ಲಿ ಅವರು ಆಡಲಿದ್ದಾರೆ. 2020ರ ಟಿ20 ವಿಶ್ವಕಪ್ಗೆ ಆಸ್ಪ್ರೇಲಿಯಾ ಆತಿಥ್ಯ ವಹಿಸಲಿದ್ದು, ಚೊಚ್ಚಲ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಲಂಕಾ ವಿರುದ್ಧದ ಸರಣಿಯಲ್ಲಿ ಆಸ್ಪ್ರೇಲಿಯಾ, ವಿಶ್ವಕಪ್ಗೆ ಸಿದ್ಧತೆ ಆರಂಭಿಸಲಿದೆ.
ಆಸ್ಟ್ರೇಲಿಯಾ vs ಶ್ರೀಲಂಕಾ ಟಿ20 ; ವಾಟರ್ ಬಾಯ್ ಆಗಿ ಬದಲಾದ ಪ್ರಧಾನಿ!
ಆಸ್ಟ್ರೇಲಿಯಾ ತಂಡವನ್ನು ಆ್ಯರೋನ್ ಫಿಂಚ್ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಮ್ಯಾಕ್ಸ್’ವೆಲ್, ಬಿಲ್ಲಿ ಸ್ಟ್ಯಾನ್’ಲೇಕ್ ಸೇರಿದಂತೆ ಹಿರಿಕಿರಿಯ ಆಟಗಾರರು ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ತಂಡ ಹೀಗಿದೆ: ಆ್ಯರೋನ್ ಫಿಂಚ್[ನಾಯಕ], ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ಗ್ಲೇನ್ ಮ್ಯಾಕ್ಸ್’ವೆಲ್, ಬೆನ್ ಮೆಕ್’ಡರ್ಮೋಟ್, ಕೇನ್ ರಿಚರ್ಡ್’ಸನ್, ಸ್ಟೀವ್ ಸ್ಮಿತ್, ಬಿಲ್ಲಿ ಸ್ಟ್ಯಾನ್’ಲೇಕ್, ಮಿಚೆಲ್ ಸ್ಟಾರ್ಕ್, ಆಸ್ಟನ್ ಟರ್ನರ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.