ತಂದೆಯಾದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ!

Published : Jul 30, 2020, 05:26 PM ISTUpdated : Jul 30, 2020, 06:24 PM IST
ತಂದೆಯಾದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ!

ಸಾರಾಂಶ

ಟೀಂ ಇಂಡಿಯಾ ಆಲ್ರೌಂಡರ್ ಹಾರ್ಧಿಕ್ ಪಾಂಡ್ಯಗೆ ಬಡ್ತಿ ಸಿಕ್ಕಿದೆ. ಜನವರಿ ತಿಂಗಳಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ದಿಢೀರ್ ಆಗಿ ತಂದೆಯಾಗುತ್ತಿರುವ ಮಾಹಿತಿ ಬಹಿರಂಗ ಪಡಿಸಿದ್ದರು. ಇದೀಗ ಪಾಂಡ್ಯ ಪತ್ನಿ ನತಾಶ ಸ್ಟಾಂಕೋವಿಚ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ಬರೋಡ(ಜು.30):  ಎಂ.ಎಸ್.ಧೋನಿ, ಸುರೇಶ್ ರೈನಾ, ಆರ್ ಅಶ್ವಿನ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರ ಅಪ್ಪಂದಿರ ಸಾಲಿಗೆ ಇದೀಗ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸೇರಿಕೊಂಡಿದ್ದಾರೆ.  ಹಾರ್ದಿಕ್ ಪಾಂಡ್ಯ ಇದೀಗ ತಂದೆಯಾಗಿದ್ದಾರೆ. ಪತ್ನಿ ನತಾಶ ಸ್ಟಾಂಕೋವಿಚ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಸಿಕ್ಕಾಪಟ್ಟೆ ಲೈಕ್‌ ಪಡೆಯುತ್ತಿರುವ ಹಾರ್ದಿಕ್ ಪಾಂಡ್ಯ-ನಟಾಸಾ ಸ್ಟಾಂಕೋವಿಕ್ ಮೆಟರ್ನಿಟಿ ಶೂಟ್ ಫೋಟೋಗಳು

ಹಾರ್ದಿಕ್ ಪಾಂಡ್ಯ ತಂದೆಯಾದ ಸಂಭ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪುಟ್ಟ ಕಂದನ ಫೋಟೋ ಕೂಡ ಶೇರ್ ಮಾಡಿದ್ದಾರೆ.

 

ಲಾಕ್‌ಡೌನ್ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಚ್ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಲಾಕ್‌ಡೌನ್ ನಡುವೆ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವುದಾಗಿ ಹೇಳಿಕೊಂಡಿದ್ದರು.

2020ರ ಹೊಸ ವರ್ಷ ಸಂಭ್ರಮದಲ್ಲಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಾರ್ದಿಕ್ ಪಾಂಡ್ಯ ಅಚ್ಚರಿ ನೀಡಿದ್ದರು. ಮಾಡೆಲ್ ಕಮ್ ನಟಿ ನತಾಶ್ ಸ್ಟಾಂಕೋವಿಚ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪಾಂಡ್ಯ ಫೋಟೋ ಹಾಗೂ ವಿಡೀಯೋ ಪೋಸ್ಟ್ ಮಾಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್