ರವೀಂದ್ರ ಜಡೇಜಾ ಹೊಸ ಲುಕ್; ಸೋಶಿಯಲ್ ಮಿಡಿಯಾದಲ್ಲಿ ಭರ್ಜರಿ ರೆಸ್ಪಾನ್ಸ್!

Published : Mar 04, 2021, 09:37 PM IST
ರವೀಂದ್ರ ಜಡೇಜಾ ಹೊಸ ಲುಕ್; ಸೋಶಿಯಲ್ ಮಿಡಿಯಾದಲ್ಲಿ ಭರ್ಜರಿ ರೆಸ್ಪಾನ್ಸ್!

ಸಾರಾಂಶ

ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ತಮ್ಮ ಹೇರ್‌ಸ್ಟೈಲ್ ಬದಲಿಸಿದ್ದಾರೆ. ಇಷ್ಟು ದಿನ ಲಾಂಗ್ ಹೇರ್‌ನಲ್ಲಿ ಕಾಣಿಸಿಕೊಂಡಿದ್ದ ಜಡೇಜಾ ಇದೀಗ ಹೊಸ ಲುಕ್ ಮಾಡಿಸಿಕೊಂಡಿದ್ದಾರೆ. ಹೊಸ ಲುಕ್‌ಗೆ ಅಭಿಮಾನಿಗಳು ಫಿಧಾ ಆಗಿದ್ದಾರೆ

ರಾಜ್‌ಕೋಟ್(ಮಾ.04):  ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಸೋಶಿಯಲ್ ಮಿಡಿಯಾದಲ್ಲಿ ಹೊಸ ಲುಕ್ ಫೋಟೋ ಪೋಸ್ಟ್ ಮಾಡಿದ್ದೇ ತಡ, ಅಭಿಮಾನಿಗಳು ಜಡೇಜಾ ಹೊಸ ಲುಕ್‌ಗೆ ಮಾರುಹೋಗಿದ್ದಾರೆ. ಲಾಂಗ್ ಹೇರ್‌ನಿಂದ ಸೈಡ್ ಟ್ರಿಮ್ ಮಾಡಿಸಿಕೊಂಡು ಹೊಸ ಲುಕ್‌ನಲ್ಲಿ ಜಡೇಜಾ ಕಾಣಿಸಿಕೊಂಡಿದ್ದಾರೆ.

ಮತ್ತೆ ಮತ್ತೆ ನೋಡಬೇಕೆನಿಸುವ ಸ್ಮಿತ್ ರನೌಟ್; ಜಡೇಜಾಗೂ ಅಚ್ಚು ಮೆಚ್ಚು!.

ಇದೀಗ ಹೊಸ ಲುಕ್‌ನಲ್ಲಿ ರವೀಂದ್ರ ಜಡೇಜಾ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. ವಿಶ್ರಾಂತಿಯಲ್ಲಿರುವ ಜಡೇಜಾ ತಮ್ಮ ಹೇರ್‌ಸ್ಟೈಲ್ ಬದಲಿಸಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

 

ಹೆಬ್ಬರಳಿನ ಗಾಯದಿಂದ ಟೆಸ್ಟ್ ತಂಡದಿಂದ ಹೊರಗುಳಿದಿರುವ ರವೀಂದ್ರ ಜಡೇಜಾ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಜಡೇಜಾ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಟಿ20 ಸರಣಿ ವೇಳೆಗೆ ಜಡೇಚಾ ಫಿಟ್ ಆಗುವುದು ಅನುಮಾನವಾಗಿದೆ. ಆದರೆ ಏಕದಿನ ಸರಣಿಗೆ ವಾಪಸ್ ಆಗುವ ಸಾಧ್ಯತೆ ಇದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?