
ಚೆನ್ನೈ(ಜ.30): ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್‌ಗಳನ್ನು ಆಡಲು ಚೆನ್ನೈಗೆ ತೆರಳಿರುವ ಭಾರತ ಕ್ರಿಕೆಟ್ ತಂಡದ ಆಟಗಾರರ ಮೊದಲ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಯಾರಿಗೂ ಕೊರೋನಾ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ.
ಆಟಗಾರರು ಹೋಟೆಲ್ ಕೊಠಡಿಯಲ್ಲಿ ಕ್ವಾರಂಟೈನ್‌ಗೆ ಒಳಪಟ್ಟಿದ್ದು, ಕೆಲವರ ಕುಟುಂಬ ಸದಸ್ಯರೂ ಬಯೋ ಬಬಲ್ ಪ್ರವೇಶಿಸಿದ್ದಾರೆ. ಒಟ್ಟು 6 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಲಿದ್ದು, ಈ ಅವಧಿಯಲ್ಲಿ ಇನ್ನೂ 2 ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಫೆಬ್ರವರಿ 2ರಿಂದ ತಂಡ ಅಭ್ಯಾಸ ಆರಂಭಿಸಲಿದ್ದು, ಫೆ.5ರಿಂದ ಮೊದಲ ಟೆಸ್ಟ್ ಚೆನ್ನೈನಲ್ಲಿ ಆರಂಭಗೊಳ್ಳಲಿದೆ.
ಟೆಸ್ಟ್ ಸರಣಿಯಾಡಲು ಚೆನ್ನೈ ತಲುಪಿದ ಭಾರತ, ಇಂಗ್ಲೆಂಡ್ ತಂಡಗಳು
ಟೀಂ ಇಂಡಿಯಾ ಆಟಗಾರರು ಹೋಟೆಲ್ ರೂಂನಲ್ಲೇ ಫಿಟ್ನೆಸ್ ಅಭ್ಯಾಸ ನಡೆಸುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೊಠಡಿಯಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದು, ಫೋಟೋ ವೈರಲ್ ಆಗಿದೆ. ಈಗಾಗಲೇ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ, ಪ್ರವಾಸಿ ಇಂಗ್ಲೆಂಡ್ ವಿರುದ್ದ ತವರಿನಲ್ಲಿ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.