ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಅತಿದೊಡ್ಡ ಆಘಾತ..!

By Suvarna NewsFirst Published Jan 21, 2020, 4:37 PM IST
Highlights

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಇನ್‌ ಫಾರ್ಮ್ ಆಟಗಾರ ಹೊರಬಿದ್ದಿದ್ದಾರೆ. ಯಾರು ಆ ಆಟಗಾರ.? ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ನವದೆಹಲಿ(ಜ.21): ನ್ಯೂಜಿಲೆಂಡ್ ವಿರುದ್ಧ ಜನವರಿ 24 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಸಿದ್ಧತೆ ನಡೆಸುತ್ತಿದೆ. ಹೀಗಿರುವಾಗಲೇ ತಂಡದ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಧವನ್ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎನ್ನುವ ಕುತೂಹಲಕ್ಕೆ ಇನ್ನಷ್ಟೇ ತೆರೆ ಬೀಳಬೇಕಿದೆ.

ಉತ್ತಮ ಫಾರ್ಮ್‌ನಲ್ಲಿದ್ದ ಧವನ್ ಆಸ್ಟ್ರೇಲಿಯಾ ವಿರುದ್ಧ  ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಎಡಗೈ ಭುಜದ ಗಾಯಕ್ಕೆ ತುತ್ತಾಗಿದ್ದರು. ಆಸೀಸ್ ನಾಯಕ ಆರೋನ್ ಫಿಂಚ್ ಬಾರಿಸಿದ ಚೆಂಡನ್ನು ತಡೆಯುವ ಯತ್ನದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಗಾಯದ ತೀವ್ರತೆ ತಿಳಿಯಲು ಧವನ್ ಎಕ್ಸ್-ರೇ ಮೊರೆ ಹೋಗಲಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ರೋಹಿತ್ ಶರ್ಮಾ ಜತೆ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸಿದ್ದರು.ಯತ್ನದಮ್‌ಬ್ಯಾಕ್ ಮಾಡಿದ್ದ ಧವನ್ ಆಸ್ಟ್ರೇಲಿಯಾ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ 96 ಹಾಗೂ 74 ರನ್ ಸಿಡಿಸಿದ್ದರು. ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 2-1ರಿಂದ  ಜಯಿಸಿತ್ತು. 

ಐಸಿಸಿ ಏಕದಿನ ರ‍್ಯಾಂಕಿಂಗ್: ಭಾರತೀಯರೇ ನಂ. 1

ದುರಂತವೆಂದರೆ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧವೇ ಗಾಯಗೊಂಡು ತಂಡದಿಂದಲೇ ಹೊರಬಿದ್ದಿದ್ದರು. ಇದೀಗ ಮತ್ತೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲೇ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದು ಕಾಕತಾಳೀಯವೆನಿಸುತ್ತಿದೆ.

ಬೆಂಗಳೂರಲ್ಲಿ ಘರ್ಜಿಸಿದ ಟೀಂ ಇಂಡಿಯಾ; ಏಕದಿನ ಸರಣಿ ಕೈವಶ!

ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸದಲ್ಲಿ ಐದು ಪಂದ್ಯಗಳ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಹಾಗೆಯೇ ಎರಡು ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿದೆ. 
 

click me!