ಮುಂಬರುವ ಟಿ20 ವಿಶ್ವಕಪ್ ಗೆಲ್ಲುವ ಸಾಮರ್ಥ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಗಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಬ್ರಿಯನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ನವದೆಹಲಿ[ಜ.02]: ಟೀಂ ಇಂಡಿಯಾದ ಸದ್ಯದ ಪ್ರದರ್ಶನವನ್ನು ಗಮನಿಸಿದರೆ ವಿರಾಟ್ ಕೊಹ್ಲಿ ಪಡೆ ಎಲ್ಲಾ ಐಸಿಸಿ ಟೂರ್ನಿಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಕೆರಿಬಿಯನ್ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಅಭಿಪ್ರಾಯ ಪಟ್ಟಿದ್ದಾರೆ.
undefined
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ ಹಾಗೂ ನವೆಂಬರ್’ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉಳಿದ ತಂಡಗಳಿಗೆ ಸವಾಲಾಗಲಿದೆ ಎಂದು ಲಾರಾ ಹೇಳಿದ್ದಾರೆ. ಟೀಂ ಇಂಡಿಯಾ ಐಸಿಸಿ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ತೋರುತ್ತಲೇ ಬಂದಿದೆ. ಆದರೆ ನಿರ್ಣಾಯಕ ಪಂದ್ಯಗಳಲ್ಲಿ ಮುಗ್ಗರಿಸುವ ಮೂಲಕ ಪ್ರಶಸ್ತಿ ಎತ್ತಿಹಿಡಿಯಲು ವಿಫಲವಾಗುತ್ತಿದೆ. 2013ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿದ ಬಳಿಕ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲ್ಲು ಯಶಸ್ವಿಯಾಗಿಲ್ಲ.
ವಾರ್ನರ್ ಅಭಿನಂದಿಸಲು ಹೊರಟು ನಿಂತಿದ್ದೆ: ಲಾರಾ!
ಟೀಂ ಇಂಡಿಯಾ ಆಡುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಗೆಲ್ಲುವ ಸಾಮರ್ಥ್ಯ ವಿರಾಟ್ ಪಡೆಗಿದೆ. ಎಲ್ಲಾ ತಂಡಗಳು ಟೀಂ ಇಂಡಿಯಾವನ್ನು ಟಾರ್ಗೆಟ್ ಮಾಡುತ್ತವೆ. ಎದುರಾಳಿ ತಂಡಗಳು ಟೀಂ ಇಂಡಿಯಾ ವಿರುದ್ಧ ಮಹತ್ವದ ಪಂದ್ಯಗಳನ್ನಾಡುವಾಗ ಮತ್ತಷ್ಟು ಎಚ್ಚರಿಕೆ ವಹಿಸುತ್ತವೆ ಎಂದು ಲಾರಾ ಹೇಳಿದ್ದಾರೆ.
2020 ವರ್ಷಪೂರ್ತಿ ರೋಚಕತೆ ಗ್ಯಾರಂಟಿ!
2004ರಲ್ಲಿ ಲಾರಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಜೇಯ 400 ರಬ್ ಬಾರಿಸಿದ್ದರು. 15 ವರ್ಷಗಳಾದರೂ ಆ ದಾಖಲೆಯನ್ನು ಯಾವೊಬ್ಬ ಬ್ಯಾಟ್ಸ್’ಮನ್’ಗೂ ಅಳಿಸಿಹಾಕಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಲಾರಾ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇಲ್ಲವೇ ಡೇವಿಡ್ ವಾರ್ನರ್ ಈ ದಾಖಲೆ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದಾರೆ.
2007ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಜಯಿಸಿತ್ತು. ಇದಾದ ಬಳಿಕ ಭಾರತ ಟಿ20 ವಿಶ್ವಕಪ್ ಗೆಲ್ಲಲು ವಿಫಲವಾಗುತ್ತಲೇ ಬಂದಿದೆ. ಇದೀಗ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ಟಿ20 ವಿಶ್ವಕಪ್ ಟೂರ್ನಿ ಜರುಗಲಿದ್ದು, ಭಾರತ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದೆ.