ಇಂಗ್ಲೆಂಡ್ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್‌..!

Published : Jul 04, 2022, 10:31 AM ISTUpdated : Jul 04, 2022, 10:32 AM IST
ಇಂಗ್ಲೆಂಡ್ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್‌..!

ಸಾರಾಂಶ

* ರೋಚಕಘಟ್ಟದತ್ತ ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ * ಜುಲೈ 07ರಿಂದ ಉಭಯ ತಂಡಗಳ ನಡುವೆ ಸೀಮಿತ ಓವರ್‌ಗಳ ಸರಣಿ ಆರಂಭ * ಸೀಮಿತ ಓವರ್‌ಗಳ ಸರಣಿ ಆರಂಭಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಪಾಲಿಗೆ ಗುಡ್‌ ನ್ಯೂಸ್‌

ಬರ್ಮಿಂಗ್‌ಹ್ಯಾಮ್‌(ಜು.04): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಪುನರ್‌ನಿಗದಿಯಾಗಿದ್ದ 5ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ಸಾಗುತ್ತಿದ್ದು, ಇದೆಲ್ಲದರ ನಡುವೆ ಟೀ ಇಂಡಿಯಾ ಪಾಲಿಗೆ ಗುಡ್‌ ನ್ಯೂಸ್ ಹೊರಬಿದ್ದಿದೆ. ಕೋವಿಡ್‌ನಿಂದಾಗಿ ಇಂಗ್ಲೆಂಡ್ ಎದುರಿನ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಗುಣಮುಖರಾಗಿದ್ದು, ಇಂಗ್ಲೆಂಡ್ ಎದುರಿನ ಸೀಮಿತ ಓವರ್‌ಗಳ ಸರಣಿಗೆ ತಂಡ ಕೂಡಿಕೊಳ್ಳುವುದು ಖಚಿತ ಎನಿಸಿದೆ.

ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳ ನಡುವಿನ ಟೆಸ್ಟ್‌ ಪಂದ್ಯ ಮುಕ್ತಾಯವಾದ ಬಳಿಕ ಉಭಯ ಕ್ರಿಕೆಟ್‌ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿವೆ. ಸದ್ಯ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಅನುಪಸ್ಥಿತಿಯಲ್ಲಿ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಭಾರತ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಗೆಲುವು ಇಲ್ಲವೇ ಡ್ರಾ ಸಾಧಿಸಿದರೂ ಸಹಾ ಟೆಸ್ಟ್ ಸರಣಿ ಭಾರತದ ಪಾಲಾಗಲಿದೆ. ಇನ್ನೊಂದೆಡೆ ಇಂಗ್ಲೆಂಡ್ ಕ್ರಿಕೆಟ್ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೇ ಈ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಕೋವಿಡ್‌ನಿಂದ (COVID 19) ಚೇತರಿಸಿಕೊಂಡಿದ್ದು ಇಂಗ್ಲೆಂಡ್‌ ವಿರುದ್ಧ ಜುಲೈ 7ರಿಂದ ಆರಂಭಗೊಳ್ಳಲಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಮರುನಿಗದಿತ 5ನೇ ಟೆಸ್ಟ್‌ಗೂ ಮುನ್ನ ಸೋಂಕಿಗೆ ತುತ್ತಾಗಿದ್ದ ರೋಹಿತ್‌, ಟೆಸ್ಟ್‌ನಿಂದ ಹೊರಬಿದ್ದಿದ್ದರು. ಇದೀಗ ಅವರ 2ನೇ ಕೋವಿಡ್‌ ಪರೀಕ್ಷಾ ವರದಿಯೂ ನೆಗೆಟಿವ್‌ ಎಂದು ಬಂದಿದ್ದು, ಅವರು ಸಂಪೂರ್ಣ ಚೇತರಿಕೆ ಕಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸರಣಿಗೆ ಈಗಾಗಲೇ ತಂಡ ಪ್ರಕಟಿಸಿರುವ ಬಿಸಿಸಿಐ (BCCI) ರೋಹಿತ್‌ರನ್ನೇ ನಾಯಕನನ್ನಾಗಿ ಹೆಸರಿಸಿದೆ.

ಜಸ್ಪ್ರೀತ್ ಬುಮ್ರಾ ಯಾರೆಂದ Barmy Army, ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದ Bharat Army.!

ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡದ (Indian Cricket Team) ನಾಯಕರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ವಿದೇಶಿ ನೆಲದಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಕೋವಿಡ್‌ನಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ನಾಯಕನಾಗಿ ಹಾಗೂ ಆರಂಭಿಕ ಬ್ಯಾಟರ್‌ ಆಗಿ ತಂಡಕ್ಕೆ 100% ಕೊಡುಗೆ ನೀಡಲು ಎದುರು ನೋಡುತ್ತಿದ್ದಾರೆ. 

ಟಿ20 ಸರಣಿ ಜುಲೈ 7ಕ್ಕೆ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ಸೌಥಾಂಪ್ಟನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ ಜುಲೈ 9, 10ಕ್ಕೆ ಉಳಿದೆರಡು ಪಂದ್ಯಗಳು ಕ್ರಮವಾಗಿ ಬಮಿಂಗ್‌ಹ್ಯಾಮ್‌ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿವೆ. ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್‌, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ.

ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್‌ ಸಿಂಗ್, ಉಮ್ರಾನ್ ಮಲಿಕ್.

ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್‌ ಪಟೇಲ್, ಉಮ್ರಾನ್ ಮಲಿಕ್.

ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್‌, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!