ಇನ್‌ಸ್ಟಾಗ್ರಾಂ ಫಾಲೋವರ್ಸ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ..!

Suvarna News   | Asianet News
Published : Sep 04, 2021, 09:20 AM IST
ಇನ್‌ಸ್ಟಾಗ್ರಾಂ ಫಾಲೋವರ್ಸ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ..!

ಸಾರಾಂಶ

* ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ * 150 ಮಿಲಿಯನ್‌ ಫಾಲೋವರ್ಸ್‌ ಹೊಂದಿದ ಆರ್‌ಸಿಬಿ ನಾಯಕ ಕೊಹ್ಲಿ * ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ವ್ಯಕ್ತಿ ಫುಟ್ಬಾಲಿಗ ಕ್ರಿಸ್ಟಿಯಾನೋ ರೋನಾಲ್ಡೋ

ನವದೆಹಲಿ(ಸೆ.04): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸಾಮಾಜಿಕ ತಾಣ ಇನ್‌ಸ್ಟಾಗ್ರಾಂನಲ್ಲಿ 15 ಕೋಟಿ ಹಿಂಬಾಲಕರನ್ನು ಹೊಂದಿರುವ ಭಾರತದ ಹಾಗೂ ಏಷ್ಯಾದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಜಾಗತಿಕ ಕ್ರೀಡಾ ತಾರೆಗಳ ಪೈಕಿ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. 

ಈ ಮೊದಲು 7.5 ಕೋಟಿ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ಏಷ್ಯಾದ ಮೊದಲಿಗ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದರು. ಇನ್‌ಸ್ಟಾಗ್ರಾಂ ಮಾತ್ರವಲ್ಲದೇ ವಿರಾಟ್ ಕೊಹ್ಲಿಗೆ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಹಾಗೂ ಫೇಸ್‌ಬುಕ್‌ಗಳಲ್ಲೂ ಕೋಟ್ಯಾಂತರ ಫಾಲೋವರ್ಸ್‌ಗಳಿದ್ದಾರೆ. ವಿರಾಟ್‌ಗೆ ಫೇಸ್‌ಬುಕ್‌ನಲ್ಲಿ 4.3 ಕೋಟಿ ಹಾಗೂ ಟ್ವಿಟರ್‌ನಲ್ಲಿ 4.8 ಕೋಟಿ ಫಾಲೋವರ್ಸ್‌ ಇದ್ದಾರೆ.

ಟೆಸ್ಟ್‌ ರ‍್ಯಾಂಕಿಂಗ್‌‌: ಜೋ ರೂಟ್‌ ನಂ.1, ಕೊಹ್ಲಿ ಹಿಂದಿಕ್ಕಿದ ರೋಹಿತ್‌!

ಪೋರ್ಚುಗಲ್‌ನ ಫುಟ್ಬಾಲಿಗ ಕ್ರಿಸ್ಟಿಯಾನೋ ರೋನಾಲ್ಡೋ 33.7 ಕೋಟಿ ಹಿಂಬಾಲಕರೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾದ ಫುಟ್ಬಾಲಿಗ ಲಿಯೋನೆಲ್‌ ಮೆಸ್ಸಿ ಹಾಗೂ ಬ್ರೆಜಿಲ್‌ನ ಫುಟ್ಬಾಲಿಗ ನೇಯ್ಮಾರ್‌ ಕ್ರಮವಾಗಿ 26 ಕೋಟಿ ಹಾಗೂ 16 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?