ಧೋನಿ ವಿದಾಯಕ್ಕೆ ಭಾವನಾತ್ಮಕವಾಗಿ ಶುಭ ಕೋರಿದ ವಿರಾಟ್ ಕೊಹ್ಲಿ..!

Suvarna News   | Asianet News
Published : Aug 16, 2020, 09:26 AM ISTUpdated : Aug 16, 2020, 10:31 AM IST
ಧೋನಿ ವಿದಾಯಕ್ಕೆ ಭಾವನಾತ್ಮಕವಾಗಿ ಶುಭ ಕೋರಿದ ವಿರಾಟ್ ಕೊಹ್ಲಿ..!

ಸಾರಾಂಶ

ಮಾಜಿ ನಾಯಕ ಎಂ ಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಧೋನಿ ವಿದಾಯಕ್ಕೆ ಕ್ಯಾಪ್ಟನ್ ಕೊಹ್ಲಿ ಭಾವನಾತ್ಮಕ ಸಂದೇಶದ ಮೂಲಕ ಶುಭ ಕೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಆ.16): ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶದ ಮೂಲಕ ಶುಭ ಕೋರಿದ್ದಾರೆ.

"

ಪ್ರತಿಯೊಬ್ಬ ಕ್ರಿಕೆಟಿಗನೂ ಒಂದಲ್ಲ ಒಂದು ದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲೇ ಬೇಕು. ಆದರೆ ತುಂಬ ಹತ್ತಿರವಿದ್ದವರೂ ವಿದಾಯ ಹೇಳಿದಾಗ ಮನಸ್ಸು ಭಾರವಾಗುತ್ತದೆ. ನೀವು ದೇಶಕ್ಕಾಗಿ ಏನೆಲ್ಲಾ ಸಾಧಿಸಿದ್ದೀರೋ ಅದು ಪ್ರತಿಯೊಬ್ಬರ ಹೃದಯಲ್ಲಿ ಚಿರಸ್ಥಾಯಿಯಾಗಿ ಉಳಿದಿರುತ್ತೆ. ಆದರೆ ನಿಮ್ಮಿಂದ ಸಮಾನ ಗೌರವ ಹಾಗೂ ಪ್ರೀತಿ ಗಳಿಸಿದ್ದು ನನ್ನ ಮನದಲ್ಲಿ ಯಾವಾಗಲೂ ನೆನಪಿನಲ್ಲಿ ಇರುತ್ತೆ. ಇಡೀ ಜಗತ್ತು ನಿಮ್ಮ ಸಾಧನೆಯನ್ನು ನೋಡುತ್ತೆ. ನಾನು ನಿಮ್ಮಲ್ಲಿ ಒಬ್ಬ ಅಸಾಧಾರಣ ವ್ಯಕ್ತಿಯನ್ನಾಗಿ ನೋಡುತ್ತೇನೆ. ಎಲ್ಲವನ್ನೂ ನೀಡಿದ ನಿಮಗೆ ಹೃದಯಾಳದಿಂದ ಅಭಿನಂದನೆಗಳು ನಾಯಕ ಎಂದು ಕ್ಯಾಪ್ಟನ್ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಂನಲ್ಲಿ ಶುಭ ಕೋರಿದ್ದಾರೆ.

ಕಪಿಲ್ ದೇವ್ to ಸ್ಟೀವ್ ವ್ಹಾ; ದಿಗ್ಗಜ ಕ್ರಿಕೆಟಿಗರ ಮಾತುಗಳಲ್ಲಿ MS ಧೋನಿ!

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ(ಆ.15) ಇನ್‌ಸ್ಟಾಗ್ರಾಂ ಮೂಲಕವೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಧನ್ಯವಾದಗಳು. ನನ್ನ ಜೀವನದುದ್ದಕ್ಕೂ ಪ್ರೀತಿ ಹಾಗೂ ವಿಶ್ವಾಸವನ್ನು ನೀಡಿದ ಎಲ್ಲರಿಗೂ ಧನ್ಯವಾದಗಳು. ಇಂದಿನ 1929(7.29) ಗಂಟೆಯ ಬಳಿಕ ನಾನು ನಿವೃತ್ತಿಯಾಗಿದ್ದೇನೆ ಎಂದು ಪರಿಗಣಿಸಿ ಎಂದು ಬರೆದುಕೊಳ್ಳುವ ಮೂಲಕ ದಿಢೀರ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಮೈದಾನದಲ್ಲಿ ಧೋನಿ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಸಾಕಷ್ಟು ಸಲಹೆಗಳನ್ನು ನೀಡುತ್ತಿದ್ದರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು.  ಇನ್ನು ಧೋನಿ 2014ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದರು. ಇದೀಗ ಐಪಿಎಲ್ ಆರಂಭಕ್ಕೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ