MS ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನ ಶ್ರೇಷ್ಠ ನಾಯಕ: ರವಿಶಾಸ್ತ್ರಿ

Suvarna News   | Asianet News
Published : Oct 02, 2021, 04:34 PM IST
MS ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನ ಶ್ರೇಷ್ಠ ನಾಯಕ: ರವಿಶಾಸ್ತ್ರಿ

ಸಾರಾಂಶ

* ಧೋನಿ ನಾಯಕತ್ವ ಗುಣಗಾನ ಮಾಡಿದ ರವಿಶಾಸ್ತ್ರಿ * ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಧೋನಿ ದಿಗ್ಗಜ ನಾಯಕ * ಸೀಮಿತ ಓವರ್‌ಗಳ ಕ್ರಿಕೆಟ್‌ ನಾಯಕತ್ವದಲ್ಲಿ ಧೋನಿ ಲೆಜೆಂಡ್

ನವದೆಹಲಿ(ಅ.02): ಮಹೇಂದ್ರ ಸಿಂಗ್ ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನ ಶ್ರೇಷ್ಠ ನಾಯಕ ಎಂದು ಟೀಂ ಇಂಡಿಯಾ (Team India) ಹೆಡ್‌ ಕೋಚ್‌ ರವಿಶಾಸ್ತ್ರಿ ಬಣ್ಣಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ ಮಾದರಿಯಲ್ಲಿ ನಾಯಕನಾಗಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಧೋನಿ ಮಾಡಿದ್ದಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಮುಂಬರುವ ಐಸಿಸಿ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ರವಿಶಾಸ್ತ್ರಿ (Ravi Shastri) ಹಾಗೂ ಮಹೇಂದ್ರ ಸಿಂಗ್ ಧೋನಿ ಒಟ್ಟಾಗಿ ಕಾರ್ಯನಿರ್ವಹಿಸಲಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಟೀಂ ಇಂಡಿಯಾ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದೀಗ 59 ವರ್ಷದ ರವಿಶಾಸ್ತ್ರಿ ಟೀಂ ಇಂಡಿಯಾ ಕಂಡ ದಿಗ್ಗಜ ನಾಯಕ ಧೋನಿ ಗುಣಗಾನ ಮಾಡಿದ್ದಾರೆ.

ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸರ್ವಶ್ರೇಷ್ಠ ನಾಯಕ. ಐಸಿಸಿ ಟೂರ್ನಮೆಂಟ್‌ನಲ್ಲಿ ಅವರ ಸಾಧನೆಯ ಅಂಕಿ-ಅಂಶಗಳನ್ನು ನೋಡಿದರೆ ಎಲ್ಲರಿಗೂ ಗೊತ್ತಾಗುತ್ತೆ. ಅವರು ಯಾವುದನ್ನು ಗೆದ್ದಿಲ್ಲ ಹೇಳಿ? ಐಪಿಎಲ್‌, ಚಾಂಪಿಯನ್ಸ್‌ ಲೀಗ್, ಐಸಿಸಿ ಎಲ್ಲಾ ಟೂರ್ನಮೆಂಟ್‌, ಎರಡು ವಿಶ್ವಕಪ್. ಸೀಮಿತ ಓವರ್‌ಗಳ ಕ್ರಿಕೆಟ್‌ ನಾಯಕತ್ವದ ಬಗ್ಗೆ ಹೋಲಿಕೆ ಮಾಡಿದರೆ ಯಾರೂ ಸಹ ಧೋನಿ ಬಳಿ ಸುಳಿಯಲು ಸಾಧ್ಯವಿಲ್ಲ ಎಂದು ರವಿಶಾಸ್ತ್ರಿ Fan Coade ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

IPL 2021 ಧೋನಿ ಒಮ್ಮೆ ತುಂಬಾ ಸಿಟ್ಟಾಗಿದ್ದರು, ಅಶ್ವಿನ್‌ ಬಾಯಿ ಮುಚ್ಚಿಸಿದ್ದರು: ವಿರೇಂದ್ರ ಸೆಹ್ವಾಗ್‌..!

ಧೋನಿ ನಾಯಕತ್ವವನ್ನು ಗಮನಿಸಿದರೆ ಅವರ ತಂಡದಲ್ಲಿ ಭದ್ರತೆಯ ವಾತಾವರಣವಿರುತ್ತದೆ ಹಾಗೂ ಅವರು ಶಾಂತರೀತಿಯಿಂದ ವರ್ತಿಸುತ್ತಾರೆ. ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳು ಸಿಕ್ಸರ್‌ ಹಾಗೂ ಬೌಂಡರಿ ಬಾರಿಸುತ್ತಿದ್ದರೂ ಧೋನಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ಇದೇ ಧೋನಿ ಹಾಗೂ ಇತರ ನಾಯಕರ ನಡುವೆ ಇರುವ ವ್ಯತ್ಯಾಸ ಎಂದು ರವಿಶಾಸ್ತ್ರಿ ಬಣ್ಣಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ (MS Dhoni) 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದೀಗ ಐಪಿಎಲ್‌ನಲ್ಲಿ (IPL) ಧೋನಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಲೀಗ್‌ ಹಂತದಲ್ಲೇ ಹೊರಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ (Chennai Super Kings) ವು 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 11 ಪಂದ್ಯಗಳಲ್ಲಿ 9 ಗೆಲುವು ಹಾಗೂ 2 ಸೋಲುಗಳೊಂದಿಗೆ 18 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?