ಕ್ರಿಕೆಟಿಗ ಕೆ ಎಲ್ ರಾಹುಲ್, ಸದ್ಯ ಇಂಗ್ಲೆಂಡ್ ಎದುರು ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದರು.
ತುಮಕೂರು(ಫೆ.190): ಉಚಿತ ಊಟ, ವಿದ್ಯೆ ಹಾಗೂ ವಸತಿ ಮೂಲಕ ತ್ರಿವಿಧ ದಾಸೋಹ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಸಿದ್ಧಗಂಗಾ ಕ್ಷೇತ್ರಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಇದನ್ನು ವೀರಶೈವ ಲಿಂಗಾಯತ್ ಅಫಿಶಿಯಲ್ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಲಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಕ್ರಿಕೆಟಿಗ ಕೆ ಎಲ್ ರಾಹುಲ್, ಸದ್ಯ ಇಂಗ್ಲೆಂಡ್ ಎದುರು ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ವೈಜಾಗ್ ಹಾಗೂ ರಾಜ್‌ಕೋಟ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಬಿಡುವಿನ ಸಮಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಇದೀಗ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.
ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್ ಸಿದ್ದಗಂಗಾಮಠಕ್ಕೆ ಭೇಟಿ. pic.twitter.com/9xsq5NQmqH
— Veerashaiva Lingayath Official (@VL_Karnataka)ಇಂಗ್ಲೆಂಡ್ ಎದುರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೆ ಎಲ್ ರಾಹುಲ್ ಸಮಯೋಚಿತ 86 ರನ್ ಸಿಡಿಸಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದಾದ ಬಳಿಕ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು.
500-501 ವಿಕೆಟ್ ನಡುವೆ ನಡೆದಿದ್ದು ಅನೇಕ: ಅಶ್ವಿನ್ ಪತ್ನಿ ಪ್ರೀತಿ ಭಾವನಾತ್ಮಕ ಪೋಸ್ಟ್
ರಾಂಚಿ ಟೆಸ್ಟ್‌ಗೆ ರಾಹುಲ್ ಇನ್, ಬುಮ್ರಾ ಔಟ್..?
ಹೌದು, ಇದೇ ಫೆಬ್ರವರಿ 23ರಿಂದ ರಾಂಚಿಯಲ್ಲಿ ನಡೆಯಲಿರುವ ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್‌ಗೆ ಕನ್ನಡಿಗ ಕೆ ಎಲ್ ರಾಹುಲ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾದಲ್ಲಿ ಬಹುತೇಕ ರಜತ್ ಪಾಟೀದಾರ್ ಆಡುವ ಹನ್ನೊಂದರ ಬಳಗದಿಂದ ಹೊರಬೀಳುವ ಸಾಧ್ಯತೆಯಿದೆ.
ಇನ್ನು ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾಗೆ ಮುಂಬರುವ ಮಹತ್ವದ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ನಾಲ್ಕನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಎಲ್ಲಾ ಪಿಚ್‌ಗಳಲ್ಲೂ ನಾವು ಗೆಲ್ಲಬಲ್ಲೆವು: ರೋಹಿತ್ ಶರ್ಮಾ!
ಸದ್ಯ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಭಾರತ 2-1ರ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಕಳೆದೆರಡು ಟೆಸ್ಟ್ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಜಯಿಸಿ ಆಂಗ್ಲರಿಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ.