
ದುಬೈ[ನ.14]: ಹಾರ್ದಿಕ್ ಪಾಂಡ್ಯ ಸದ್ಯ ಭಾರತದ ಶ್ರೇಷ್ಠ ಆಲ್ರೌಂಡರ್ ಎಂದು ಕರೆಸಿಕೊಳ್ಳುವ ಕ್ರಿಕೆಟಿಗ. ಆದರೆ ನೂತನವಾಗಿ ಪ್ರಕಟಗೊಂಡಿರುವ ಐಸಿಸಿ ಟಿ20 ಆಲ್ರೌಂಡರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಂಡ್ಯಗಿಂತ ಉನ್ನತ ಸ್ಥಾನವನ್ನು ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಪಡೆದುಕೊಂಡಿದ್ದಾರೆ.
ICC ಟಿ20 ರ‍್ಯಾಂಕಿಂಗ್ ಪ್ರಕಟ: ಹ್ಯಾಟ್ರಿಕ್ ವೀರ ದೀಪಕ್ ಚಹರ್’ಗೆ ಬಂಪರ್..!
ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಎಲ್ಲರಿಗಿಂತ ಮುಂದಿರುವ ಆಟಗಾರ ಎಂದರೆ ಅದು ಕೊಹ್ಲಿ. ಅವರು 22ನೇ ಸ್ಥಾನದಲ್ಲಿದ್ದಾರೆ. ಕೃನಾಲ್ ಪಾಂಡ್ಯ 2ನೇ ಶ್ರೇಷ್ಠ ಆಲ್ರೌಂಡರ್. ಅವರು 41ನೇ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ 48ನೇ ಸ್ಥಾನದಲ್ಲಿದ್ದರೆ, ಹಾರ್ದಿಕ್ ವಿಶ್ವ ರ‍್ಯಾಂಕಿಂಗ್ ಪಟ್ಟಿಯಲ್ಲಿ 58ನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟರ್ ಆಸೋಸಿಯೇಶನ್‌ಗೆ ವ್ಯಾಟ್ಸನ್ ಅಧ್ಯಕ್ಷ!
ಬ್ಯಾಟಿಂಗ್‌ನಲ್ಲಿ ರೋಹಿತ್ ಹಾಗೂ ಕೊಹ್ಲಿ ಅಸಾಧಾರಣ ಪ್ರದರ್ಶನ ತೋರುತ್ತಿದ್ದರೂ, ಬೌಲಿಂಗ್‌ನಲ್ಲಿ ಇಬ್ಬರ ಸಾಧನೆ ಹೇಳಿಕೊಳ್ಳುವಂತದ್ದಲ್ಲ. ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊನೆ ಬಾರಿಗೆ ಬೌಲ್ ಮಾಡಿದ್ದು 2016ರ ವಿಶ್ವಕಪ್ನಲ್ಲಿ. ವಿಂಡೀಸ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಅವರು 1.4 ಓವರ್ ಎಸೆದಿದ್ದರು. ರೋಹಿತ್ ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊನೆ ಬಾರಿಗೆ ಬೌಲ್ ಮಾಡಿದ್ದು 2012ರ ಟಿ20 ವಿಶ್ವಕಪ್ನಲ್ಲಿ. ಹೀಗಿರುವಾಗ ಇಬ್ಬರಿಗೂ ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಉನ್ನತ ಸ್ಥಾನ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ.
ಸೆಪ್ಟೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡ ಪಾಂಡ್ಯ ಚೇತರಿಸಿಕೊಳ್ಳುತ್ತಿದ್ದು ಶೀಘ್ರದಲ್ಲಿ ತಂಡಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ಪಾಂಡ್ಯ ತಂಡಕ್ಕೆ ವಾಪಸಾದ ಬಳಿಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ. ಐಸಿಸಿ ಟಿ20 ಆಲ್ರೌಂಡರ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಫ್ಘಾನಿಸ್ತಾನದ ಮೊಹಮ್ಮದ್ ನಬೀ 339 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್’ವೆಲ್ 333 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.