ಕುಕ್ಕೆ ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ ಮಾಡಿಸಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್!

By Naveen Kodase  |  First Published Jun 12, 2024, 3:47 PM IST

ಮಯಾಂಕ್ ಅಗರ್‌ವಾಲ್, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಹಾಗೂ ಕಟೀಲು ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಾಂಕ್ ಅಗರ್‌ವಾಲ್ ಹಾಗೂ ಪತ್ನಿ ಆಶಿತಾ ಸೂದ್ ಭೇಟಿ ನೀಡಿದ್ದಾರೆ. ಈ ಎರಡೂ ದೇವಸ್ಥಾನಕ್ಕೆ ಭೇಟಿ ನೀಡಿ ಈ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


ದಕ್ಷಿಣ ಕನ್ನಡ: ಟೀಂ ಇಂಡಿಯಾ ಕ್ರಿಕೆಟಿಗ ಮಯಾಂಕ್ ಅಗರ್‌ವಾಲ್, ಐಪಿಎಲ್ ಮುಗಿಯುತ್ತಿದ್ದಂತೆಯೇ ತಮ್ಮ ಪತ್ನಿಯ ಜತೆ ಟೆಂಪಲ್ ರನ್ ಮಾಡಿದ್ದಾರೆ. ಇದೀಗ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ. ಇದರ ಕೆಲವೊಂದು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿವೆ.

ಹೌದು, ಮಯಾಂಕ್ ಅಗರ್‌ವಾಲ್, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಹಾಗೂ ಕಟೀಲು ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಾಂಕ್ ಅಗರ್‌ವಾಲ್ ಹಾಗೂ ಪತ್ನಿ ಆಶಿತಾ ಸೂದ್ ಭೇಟಿ ನೀಡಿದ್ದಾರೆ. ಈ ಎರಡೂ ದೇವಸ್ಥಾನಕ್ಕೆ ಭೇಟಿ ನೀಡಿ ಈ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Tap to resize

Latest Videos

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಬಳಿಕ, ಈ ಜೋಡಿ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಕ್ಕೆಯಲ್ಲಿ ಗೋ ಪೂಜೆ, ಬ್ರಹ್ಮಚಾರಿ ಆರಾಧನೆ ಹಾಗೂ ನಾಗಪ್ರತಿಷ್ಠ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ ದೇವರ ಪ್ರಸಾದ ಪಡೆದು ಪ್ರಸಾದ ಭೋಜನ ಸ್ವೀಕಾರ ಮಾಡಿದ್ದಾರೆ. ಕುಕ್ಕೆಗೆ ಭೇಟಿ ನೀಡಿರುವ ಫೋಟೋಗಳನ್ನು ಮಯಾಂಕ್ ಅಗರ್‌ವಾಲ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ಫೋಸ್ಟ್ ಮಾಡಿದ್ದಾರೆ.

ಯುಎಸ್‌ಎ ಎದುರಿನ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ; ಕೊನೆಗೂ ಒಂದು ಬದಲಾವಣೆಗೆ ಮುಂದಾದ ರೋಹಿತ್ ಪಡೆ

ಇನ್ನು ಕ್ರಿಕೆಟ್ ವಿಚಾರಕ್ಕೆ ಬರುವುದಾದರೇ ಇತ್ತೀಚೆಗಷ್ಟೇ ಮುಕ್ತಾಯವಾದ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಯಾಂಕ್ ಅಗರ್‌ವಾಲ್, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು. ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಫೈನಲ್ ಪ್ರವೇಶಿಸಿತ್ತಾದರೂ, ಕೋಲ್ಕತಾ ನೈಟ್ ರೈಡರ್ಸ್ ಎದುರು ಸೋಲು ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇನ್ನು ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಟ್ರ್ಯಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಹೆಚ್ಚು ಯಶಸ್ವಿಯಾಗಿದ್ದರಿಂದ ಮಯಾಂಕ್ ಅಗರ್‌ವಾಲ್‌ಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೆಚ್ಚು ಅವಕಾಶ ಸಿಕ್ಕಿರಲಿಲ್ಲ.

click me!