
ತೆಲಂಗಾಣ: ಟಿ20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ಸದಸ್ಯ ಮೊಹಮದ್ ಸಿರಾಜ್‌ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಮೀನು ಮತ್ತು ಸರ್ಕಾರಿ ಹುದ್ದೆ ನೀಡುವುದಾಗಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ತಮ್ಮ ತವರು ತೆಲಂಗಾಣಕ್ಕೆ ಆಗಮಿಸಿದ್ದ ಸಿರಾಜ್‌ರನ್ನು ಮಂಗಳವಾರ ಮುಖ್ಯಮಂತ್ರಿ ರೇವಂತ್ ಅವರು ತಮ್ಮ ನಿವಾಸದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಅಲ್ಲದೆ ಸಿರಾಜ್‌ಗೆ ಹೈದರಾಬಾದ್‌ನಲ್ಲಿ ಜಾಗ ಹಾಗೂ ಸರ್ಕಾರಿ ಹುದ್ದೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಮೊಹಮ್ಮದ್ ಸಿರಾಜ್ ಇಡೀ ದೇಶವೇ ಹೆಮ್ಮೆಪಡುವಂತ ಸಾಧನೆ ಮಾಡಿದ್ದಾರೆ. ಅವರು ನಮ್ಮ ತೆಲಂಗಾಣದವರು ಎನ್ನುವುದು ನಮ್ಮ ಹೆಮ್ಮೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಲಗೈ ವೇಗಿಯನ್ನು ಸನ್ಮಾನಿಸಿದರು. ಇದೇ ವೇಳೆ ಸಿರಾಜ್, ಭಾರತದ ಜೆರ್ಸಿಯನ್ನು ಮುಖ್ಯಮಂತ್ರಿಗೆ ಉಡುಗೊರೆಯಾಗಿ ನೀಡಿದರು. ಭಾರತದ ಮಾಜಿ ಕ್ರಿಕೆಟಿಗ ಮೊಹಮದ್ ಅಜರುದ್ದೀನ್ ಈ ಸಂದರ್ಭ ಉಪಸ್ಥಿತರಿದ್ದರು.
ಟೀಂ ಇಂಡಿಯಾ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಘೋಷಿಸಿದ ಜಯ್ ಶಾ!
ಚಾನ್ಸ್ ಕೊಟ್ರೆ ಚಾಂಪಿಯನ್ಸ್ ಟ್ರೋಫಿ ಆಡ್ತೇನೆ: ವಾರ್ನರ್
ಸಿಡ್ನಿ: ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಮುಗಿದ ಅಧ್ಯಾಯ ಎಂದು ಬಣ್ಣಿಸಿದ ಹೊರತಾಗಿಯೂ ಆಸ್ಟ್ರೇಲಿಯಾದ ನಿವೃತ್ತ ಕ್ರಿಕೆಟಿಗ ಡೇವಿಡ್ ವಾರ್ನರ್, ಅವಕಾಶ ಕೊಟ್ಟರೆ 2025ರ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧನಿದ್ದೇನೆ ಎಂದಿದ್ದಾರೆ. ಕಳೆದ ನವೆಂಬರ್‌ನಲ್ಲಿ ವಿಶ್ವಕಪ್ ಬಳಿಕ ಏಕದಿನದಿಂದ ನಿವೃತ್ತಿಯಾಗಿದ್ದ ವಾರ್ನರ್, ಜನವರಿಯಲ್ಲಿ ಟೆಸ್ಟ್‌ಗೆ ವಿದಾಯ ಹೇಳಿದ್ದರು.
ರಾಹುಲ್ ದ್ರಾವಿಡ್ ಬಗ್ಗೆ ರೋಹಿತ್ ಶರ್ಮಾ ಭಾವುಕ ಪೋಸ್ಟ್..!
ಇತ್ತೀಚೆಗಷ್ಟೇ ಕೊನೆ ಟಿ20 ಪಂದ್ಯವಾಡಿದ್ದರು. ಆದರೆ ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್ ಮೂಲಕ ಮತ್ತೆ ಆಡುವ ಬಯಕೆ ವ್ಯಕ್ತಪಡಿಸಿದ್ದಾರೆ. ‘ಅಧ್ಯಾಯ ಮುಗಿದಿದೆ. ಆಸ್ಟ್ರೇಲಿಯಾ ಪರ ದೀರ್ಘ ಕಾಲ ಆಡಲು ಅವಕಾಶ ಸಿಕ್ಕಿದ್ದು ದೊಡ್ಡ ಗೌರವ. ಇನ್ನು ಫ್ರಾಂಚೈಸಿ ಲೀಗ್‌ಗಳಲ್ಲಿ ಮುಂದುವರಿಯುತ್ತೇನೆ. ಆದರೆ ಅವಕಾಶ ಸಿಕ್ಕರೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಆಸೀಸ್ ಪರ ಆಡುತ್ತೇನೆ’ ಎಂದಿದ್ದಾರೆ.
ದಿಗ್ಗಜ ಕ್ರಿಕೆಟಿಗ ಸನತ್ ಜಯಸೂರ್ಯ ಶ್ರೀಲಂಕಾ ತಂಡದ ಹಂಗಾಮಿ ಕೋಚ್
ಕೊಲಂಬೊ: ದಿಗ್ಗಜ ಕ್ರಿಕೆಟಿಗ ಸನತ್ ಜಯಸೂರ್ಯ ಶ್ರೀಲಂಕಾ ತಂಡದ ಹಂಗಾಮಿ ಕೋಚ್ ಆಗಿ ನೇಮಕಗೊಂಡಿದ್ದಾರೆ. ಅವರು ಭಾರತ ವಿರುದ್ಧ ಜುಲೈ 27ರಿಂದ ಆರಂಭಗೊಳ್ಳಲಿರುವ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಹಾಗೂ ಆಗಸ್ಟ್‌ನಲ್ಲಿ ನಿಗದಿಯಾಗಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಲಂಕಾ ತಂಡಕ್ಕೆ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ಕಳಪೆ ಪ್ರದರ್ಶನ ತೋರಿದ್ದರಿಂದ ಕೋಚ್ ಸ್ಥಾನಕ್ಕೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ರಾಜೀನಾಮೆ ನೀಡಿದ್ದರು. ಜಯಸೂರ್ಯ ಲಂಕಾ ಪರ 110 ಟೆಸ್ಟ್‌ಗಳಲ್ಲಿ 6,973 ರನ್, 445 ಏಕದಿನ ಪಂದ್ಯಗಳಲ್ಲಿ 13,430 ರನ್ ಕಲೆಹಾಕಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.