
ರಾಜ್‌ಕೋಟ್(ಆ.12): ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಮಾಸ್ಕ್ ಧರಿಸದೇ ಕಾರಿನಲ್ಲಿ ಸಂಚರಿಸಿ, ಪ್ರಶ್ನಿಸಿದ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದಾರೆ.
ಪತಿ ರವೀಂದ್ರ ಜಡೇಜಾ ಜೊತೆ ಸೋಮವಾರ ರಾತ್ರಿ ಕಾರಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ರವೀಂದ್ರ ಜಡೇಜಾ ಮಾಸ್ಕ್ ಧರಿಸಿದ್ದರು. ಆದರೆ, ರಿವಾಬಾ ಮಾಸ್ಕ್ ಧರಿಸಿರಲಿಲ್ಲ.
ಕಿಶನ್ ಪಾರಾ ಚೌಕ್‌ನಲ್ಲಿ ಕಾರನ್ನು ತಡೆದ ಕಾನ್‌ಸ್ಟೇಬಲ್ ಸೋನಲ್ ಗೊಸಾಯಿ ಜೊತೆ ರಿವಾಬಾ ತೀವ್ರ ವಾಗ್ವಾದ ನಡೆಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿಲ್ಲ ಎಂದು ಡಿಸಿಪಿ ಮನೋಹರ್ ಸಿನ್ಹ ಜಡೇಜಾ ತಿಳಿಸಿದ್ದಾರೆ.
ಖ್ಯಾತ ಕ್ರಿಕೆಟ್ ಅಂಕಿ-ಅಂಶ ತಜ್ಞ ಎಚ್.ಆರ್. ಗೋಪಾಲಕೃಷ್ಣ 75ರ ಸಂಭ್ರಮ
ಸದ್ಯದಲ್ಲಿಯೇ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.