ಮೊದಲ ಡೋಸ್‌ ಕೋವಿಡ್‌ ಲಸಿಕೆ ಪಡೆದ ರಿಷಭ್‌ ಪಂತ್‌

By Suvarna News  |  First Published May 14, 2021, 11:13 AM IST

* ಕೋವಿಡ್ ಮೊದಲ ಹಂತದ ಲಸಿಕೆ ಪಡೆದ ರಿಷಭ್ ಪಂತ್

* ಎಲ್ಲರೂ ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿಕೊಂಡ ವಿಕೆಟ್ ಕೀಪರ್

* ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿರುವ ರಿಷಭ್ ಪಂತ್


ನವದೆಹಲಿ(ಮೇ.14): ಭಾರತ ಕ್ರಿಕೆಟ್‌ ತಂಡದ ತಾರಾ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗುರುವಾರ ಕೊರೋನಾ ಲಸಿಕೆ ಮೊದಲ ಡೋಸ್‌ ಹಾಕಿಸಿಕೊಂಡರು. ತಾವು ಲಸಿಕೆ ಹಾಕಿಸಿಕೊಳ್ಳುತ್ತಿರುವ ಫೋಟೋವನ್ನು ಅವರು ಟ್ವೀಟ್‌ ಮಾಡಿದ್ದಾರೆ. 

ನಾನಿಂದು ಮೊದಲ ಡೋಸ್ ಲಸಿಕೆ ಪಡೆದುಕೊಂಡೆ. ಯಾರೆಲ್ಲಾ ಲಸಿಕೆ ಪಡೆಯಲು ಅರ್ಹರಿದ್ದೀರೋ ಅವರೆಲ್ಲಾ ಆದಷ್ಟು ಬೇಗ ಲಸಿಕೆ ಪಡೆಯಿರಿ ಎಂದು ರಿಷಭ್‌ ಪಂತ್ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Got my first jab today. When you are eligible, please step up and get the vaccine. The sooner we do it, the sooner we can beat this Virus. pic.twitter.com/D8AC4WrESO

— Rishabh Pant (@RishabhPant17)

Latest Videos

undefined

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ್ದ ಪಂತ್‌, ಇಂಗ್ಲೆಂಡ್‌ ಪ್ರವಾಸಕ್ಕೆ ಆಯ್ಕೆಯಾಗಿದ್ದು, ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡವು ವಿಶ್ವ ಟೆಸ್ಟ್‌ ಚಾಂಪಿಯನ್‌ ಫೈನಲ್‌ ಸೇರಿ 6 ಟೆಸ್ಟ್ ಪಂದ್ಯಗಳನ್ನಾಡಲಿದ್ದಾರೆ. ಜೂನ್ 18ರಂದು ಭಾರತ ತಂಡವು ಸೌಥಾಂಪ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೆಣಸಾಟ ನಡೆಸಲಿವೆ. ಇದಾದ ಬಳಿಕ ಅಗಸ್ಟ್ 04ರಿಂದ ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಕೊರೋನಾ ಲಸಿಕೆ ಮೊದಲ ಡೋಸ್‌ ಪಡೆದ ಜಸ್‌ಪ್ರೀತ್ ಬುಮ್ರಾ

ಈಗಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಶಿಖರ್ ಧವನ್‌ ಹಾಗೂ ಅಜಿಂಕ್ಯ ರಹಾನೆ ಮೊದಲ ಹಂತದ ಕೋವಿಡ್ ಲಸಿಕೆ ಪಡೆದಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!