ಹಿಟ್‌ ಮ್ಯಾನ್‌ ರೋಹಿತ್ ಶರ್ಮಾಗಿಂದು 34ನೇ ಹುಟ್ಟುಹಬ್ಬದ ಸಂಭ್ರಮ

Suvarna News   | Asianet News
Published : Apr 30, 2021, 01:08 PM IST
ಹಿಟ್‌ ಮ್ಯಾನ್‌ ರೋಹಿತ್ ಶರ್ಮಾಗಿಂದು 34ನೇ ಹುಟ್ಟುಹಬ್ಬದ ಸಂಭ್ರಮ

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಇಂದು 34ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಐಸಿಸಿ ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್‌ಗೆ ವಿನೂತನವಾಗಿ ಶುಭ ಕೋರಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಏ.30): ಭಾರತದ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್, ಹಿಟ್‌ ಮ್ಯಾನ್ ಖ್ಯಾತಿತ ರೋಹಿತ್ ಶರ್ಮಾ ಇಂದು(ಏ.30, 2021) ತಮ್ಮ 34ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ.

ಏಕದಿನ ಕ್ರಿಕೆಟ್‌ನಲ್ಲಿ 3 ಬಾರಿ ದ್ವಿಶತಕ ಬಾರಿಸಿದ ಜಗತ್ತಿನ ಏಕೈಕ ಬ್ಯಾಟ್ಸ್‌ಮನ್ ಎನ್ನುವ ದಾಖಲೆ ಬರೆದಿರುವ ರೋಹಿತ್ ಶರ್ಮಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಫುಲ್‌ ಶಾಟ್ ಹೊಡೆಯುವುದರಲ್ಲಿ ಮಾಸ್ಟರ್ ಎನಿಸಿಕೊಂಡಿರುವ ರೋಹಿತ್ ಶರ್ಮಾ ವಿಡಿಯೋವನ್ನು ಟ್ವೀಟ್ ಮೂಲಕ ಹಂಚಿಕೊಂಡು ವಿನೂತನವಾಗಿ ಶುಭಕೋರಿದೆ.

ಏಕದಿನ ಕ್ರಿಕೆಟ್‌ನಲ್ಲಿ 3 ದ್ವಿಶತಕಗಳ ಸರದಾರ, 2007ರ ಟಿ20 ವಿಶ್ವಕಪ್ ಹಾಗೂ 2013ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ವಿಜೇತ ತಂಡದ ಸದಸ್ಯ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,684 ರನ್‌ ಬಾರಿಸಿರುವ ರೋಹಿತ್ ಶರ್ಮಾಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

2007ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ಇದುವರೆಗೂ ಭಾರತ ಪರ 38 ಟೆಸ್ಟ್, 227 ಏಕದಿನ ಹಾಗೂ 111 ಟಿ20 ಪಂದ್ಯಗಳನ್ನಾಡಿ, ಕ್ರಮವಾಗಿ 2615, 9205 ಹಾಗೂ 2864 ರನ್ ಬಾರಿಸಿದ್ದಾರೆ.  ಟೆಸ್ಟ್‌ನಲ್ಲಿ 7, ಏಕದಿನ ಕ್ರಿಕೆಟ್‌ನಲ್ಲಿ 29 ಹಾಗೂ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 4 ಶತಕ ಬಾರಿಸಿದ್ದಾರೆ. 

ಐಪಿಎಲ್ 2021: ಚೆನ್ನೈ ಪಿಚ್‌ ಬಗ್ಗೆ ರೋಹಿತ್‌ ಅಸಮಾಧಾನ!

ಇನ್ನು ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿರುವ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ತನ್ನದೇ ಆದ ಛಾಪು ಮೂಡಿಸಿದ್ದು, ನಾಯಕನಾಗಿ ಮುಂಬೈ ಇಂಡಿಯನ್ಸ್‌ಗೆ 5 ಐಪಿಎಲ್ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಸದ್ಯ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ 6 ಪಂದ್ಯಗಳನ್ನಾಡಿ ತಲಾ 3 ಗೆಲುವು ಹಾಗೂ ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್
ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್