ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಆಸೀಸ್ ಎದುರಿನ ಏಕದಿನ ಸರಣಿಯಿಂದ ಔಟ್..?

Published : Mar 13, 2023, 05:04 PM IST
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಆಸೀಸ್ ಎದುರಿನ ಏಕದಿನ ಸರಣಿಯಿಂದ ಔಟ್..?

ಸಾರಾಂಶ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮುಕ್ತಾಯ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್

ಅಹ​ಮ​ದಾ​ಬಾ​ದ್‌(ಮಾ.13): ಭಾರ​ತದ ತಾರಾ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಮತ್ತೊಮ್ಮೆ ಬೆನ್ನು ನೋವಿಗೆ ತುತ್ತಾ​ಗಿದ್ದು, ಆಸ್ಪ್ರೇ​ಲಿಯಾ ವಿರು​ದ್ಧದ 4ನೇ ಟೆಸ್ಟ್‌ ಪಂದ್ಯ​ದಲ್ಲಿ ಭಾನು​ವಾರ ಮೈದಾ​ನಕ್ಕೆ ಇಳಿ​ಯ​ಲಿಲ್ಲ. ಪಂದ್ಯದ ನಡು​ವೆಯೇ ಅವ​ರು ಸ್ಕ್ಯಾನಿಂಗ್‌ಗೆ ಒಳ​ಗಾ​ಗಿದ್ದು, ವೈದ್ಯ​ಕೀಯ ತಂಡ ಅವರ ಮೇಲೆ ನಿಗಾ ಇರಿ​ಸಿದೆ ಎಂದು ಬಿಸಿ​ಸಿಐ ತಿಳಿ​ಸಿ​ದೆ. 

ಇನ್ನು ಇದೆಲ್ಲದರ ಜತೆಗೆ ಶ್ರೇಯಸ್ ಅಯ್ಯರ್ ಮುಂಬರುವ ಆಸೀಸ್‌ ಏಕ​ದಿನ ಸರ​ಣಿ​ಯಿಂದಲೂ ಹೊರ​ಬೀ​ಳುವ ಸಾಧ್ಯತೆ ಇದೆ ಎಂದು ಹೇಳ​ಲಾ​ಗು​ತ್ತಿದೆ. ಐಪಿಎಲ್‌ ಆರಂಭಕ್ಕೆ ಕೇವಲ 3 ವಾರ ಬಾಕಿ ಇದ್ದು, ಶ್ರೇಯಸ್‌ ಗಾಯಗೊಂಡಿರುವುದು ಕೆಕೆಆರ್‌ ತಂಡವನ್ನೂ ಆತಂಕಕ್ಕೆ ಸಿಲುಕಿಸಿದೆ. ಬೆನ್ನು​ನೋ​ವಿ​ನಿಂದಾಗಿ ಆಸೀಸ್‌ ವಿರುದ್ಧದ ಮೊದಲ ಟೆಸ್ಟ್‌ಗೂ ಶ್ರೇಯಸ್‌ ಗೈರಾ​ಗಿ​ದ್ದ​ರು.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಮಾರ್ಚ್ 17ರಿಂದ ಆರಂಭವಾಗಲಿದ್ದು, ಮೊದಲ ಏಕದಿನ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯವನ್ನು ವಹಿಸಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಡಲಿರುವ ಕೊನೆಯ ಅಂತಾರಾಷ್ಟ್ರೀಯ ಈ ಸರಣಿ ಇದಾಗಲಿದೆ. 

ಈಗಾಗಲೇ ಶ್ರೇಯಸ್ ಅಯ್ಯರ್ (Shreyas Iyer) ಅವರ ಗಾಯದ ಕುರಿತಂತೆ ಬಿಸಿಸಿಐ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದ್ದು, " ಮೂರನೇ ದಿನದಾಟದ ವೇಳೆ ಶ್ರೇಯಸ್ ಅಯ್ಯರ್ ತಮಗೆ ಸೊಂಟ ನೋವು ಕಾಣಿಸಿಕೊಂಡಿದ್ದರ ಬಗ್ಗೆ ಮಾಹಿತಿ ನೀಡಿದರು. ಅವರೀಗ ಸ್ಕ್ಯಾನ್‌ ಮಾಡಿಸಿಕೊಳ್ಳಲು ತೆರಳಿದ್ದಾರೆ. ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ಅವರ ಆರೋಗ್ಯದ ಮೇಲೆ ನಿಗಾಯಿಟ್ಟಿದ್ದಾರೆ ಎಂದು ತಿಳಿಸಿದೆ.

Ind vs Aus ಕೊನೆಯ ಟೆಸ್ಟ್‌ ಡ್ರಾನಲ್ಲಿ ಅಂತ್ಯ, ಬಾರ್ಡರ್‌-ಗವಾಸ್ಕರ್ ಸರಣಿ ಗೆದ್ದ ಭಾರತ..!

ಒಂದು ವೇಳೆ ಶ್ರೇಯಸ್‌ ಅಯ್ಯರ್ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಅಲಭ್ಯರಾದರೇ, ಕೇರಳ ಮೂಲದ ವಿಕೆಟ್ ಕೀಪರ್‌ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಬುಲಾವ್ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.  

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಮೊದಲ ಏಕದಿನ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದರೆ, ಮಾರ್ಚ್‌ 19ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ವಿಶಾಖಪಟ್ಟಣಂ ಸಾಕ್ಷಿಯಾಗಲಿದೆ. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯವು ಮಾರ್ಚ್‌ 22ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಲಿದೆ. 

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ , ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜೈದೇವ್‌ ಉನಾದ್ಕತ್‌.

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಭಾರತದ ಪಾಲು:

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್‌ ಟೆಸ್ಟ್‌ ಪಂದ್ಯವು ನೀರಸ ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸಿದೆ. ಮೊದಲೆರಡು ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿತ್ತು. ಇದಾದ ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್ ಜಯ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!