ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ಗೆ ಶಸ್ತ್ರಚಿಕಿತ್ಸೆ ಡೇಟ್ ಫಿಕ್ಸ್

Suvarna News   | Asianet News
Published : Apr 03, 2021, 10:39 AM IST
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ಗೆ ಶಸ್ತ್ರಚಿಕಿತ್ಸೆ ಡೇಟ್ ಫಿಕ್ಸ್

ಸಾರಾಂಶ

ಇಂಗ್ಲೆಂಡ್‌ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್‌ ಅಯ್ಯರ್ ಏಪ್ರಿಲ್ 08ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಏ.03): ಭಾರತದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಏಪ್ರಿಲ್‌ 8ರಂದು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 

ಪುಣೆಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ವೇಳೆ ಶ್ರೇಯಸ್‌ ಗಾಯಗೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳಲು ಕನಿಷ್ಠ 4 ತಿಂಗಳ ಸಮಯ ಬೇಕಿದೆ ಎನ್ನಲಾಗಿದೆ. 14ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿರುವ ಶ್ರೇಯಸ್‌, ಇಂಗ್ಲೆಂಡ್‌ ಕೌಂಟಿ ತಂಡ ಲಂಕಾಷೈರ್‌ ಪರ ರಾಯಲ್‌ ಲಂಡನ್‌ ಏಕದಿನ ಟೂರ್ನಿಗೂ ಅಲಭ್ಯರಾಗಲಿದ್ದಾರೆ.

26 ವರ್ಷದ ಶ್ರೇಯಸ್‌ ಅಯ್ಯರ್, 4 ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದು, ಭಾರತದಲ್ಲೇ ಅಕ್ಟೋಬರ್‌ ಹಾಗೂ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ವೇಳೆಗೆ ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ.  

ಸೆಪ್ಟೆಂಬರ್‌ ವರೆಗೂ ಶ್ರೇಯಸ್‌ ಅಯ್ಯರ್‌ ಕ್ರಿಕೆಟಿಂದ ದೂರ?

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್‌ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಡೆಲ್ಲಿಗೆ ಶರಣಾಗುವ ಮೂಲಕ ಕಪ್‌ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇನ್ನು 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಶ್ರೇಯಸ್‌ ಅನುಪಸ್ಥಿತಿಯಲ್ಲಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿಯ ಒತ್ತಡಕ್ಕೆ ಮಣಿಯಲ್ಲ, ಭಾರತಕ್ಕೆ ಹೋಗಲ್ಲ: ಮೊಂಡುವಾದ ಮಾಡುತ್ತಿರುವ ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದಲೇ ಔಟ್?
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ: ಇಂದು ಅಧಿಕೃತ ಘೋಷಣೆ? ಫ್ಯಾನ್ಸ್‌ಗೆ ಸಿಗುತ್ತಾ ಗುಡ್ ನ್ಯೂಸ್?