
ಕಾನ್ಪುರ: ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್ ಪಂದ್ಯ ಗೆದ್ದು, ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27ರಿಂದ ಇಲ್ಲಿನ ದಿ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಚೆನ್ನೈನಿಂದ ಕಾನ್ಪುರಕ್ಕೆ ಬಂದಿಳಿದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಟೀಂ ಇಂಡಿಯಾ ಆಟಗಾರರು ಉಳಿದುಕೊಳ್ಳುವ ಹೋಟೆಲ್‌ನಲ್ಲೂ ಸಿಬ್ಬಂದಿಗಳು ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಆಟಗಾರರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಹೋಟೆಲ್ ಸಿಬ್ಬಂದಿಗಳ ಮೇಲೆ ವಿರಾಟ್ ಕೊಹ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಹೌದು, ವಿರಾಟ್ ಕೊಹ್ಲಿ, ಖಾಸಗಿ ಹೋಟೆಲ್‌ಗೆ ಬಂದಿಳಿಯುತ್ತಿದ್ದಂತೆಯೇ ಹೋಟೆಲ್ ಮುಂದೆಯೇ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹೋಟೆಲ್ ಸಿಬ್ಬಂದಿಗಳು ಹಣೆಗೆ ಸಾಂಪ್ರದಾಯಿಕ ತಿಲಕವಿಟ್ಟು, ಹೂಗುಚ್ಚ ಹಾಗೂ ಗಿಫ್ಟ್ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಇದು ವಿರಾಟ್ ಕೊಹ್ಲಿಗೆ ಕೊಂಚ ಇರಿಸುಮುರಿಸುಂಟು ಮಾಡಿತು.
ಆರ್‌ಸಿಬಿ ಸಂಭಾವ್ಯ ರೀಟೈನ್ ಆಟಗಾರರ ಪಟ್ಟಿ ಪ್ರಕಟ; ಈ ಮೂವರಿಗೆ ಗೇಟ್‌ಪಾಸ್?
ಹೋಟೆಲ್‌ನೊಳಗೆ ಬರುವಾಗ ಕೊಹ್ಲಿ ಒಂದು ಕೈನಲ್ಲಿ ಹೂಗುಚ್ಚ ಹಾಗೂ ಇನ್ನೊಂದು ಕೈನಲ್ಲಿ ಅವರ ಖಾಸಗಿ ವಸ್ತುಗಳನ್ನು ಹಿಡಿದುಕೊಂಡಿದ್ದರು. ಹೀಗಿದ್ದೂ ಹೋಟೆಲ್ ಸಿಬ್ಬಂದಿ, ವಿರಾಟ್ ಕೊಹ್ಲಿಯ ಕೈಕುಲುಕಲು ಮುಂದಾದರು. ಆಗ ಕೊಹ್ಲಿ "ಸರ್, ನನಗಿರೋದು ಎರಡೇ ಕೈಗಳು" ಎಂದು ಹೇಳುವ ಮೂಲಕ ಹ್ಯಾಂಡ್‌ಶೇಕ್ ಮಾಡಲು ನಿರಾಕರಿಸಿದರು. ಆದರೆ ನಿಮ್ಮ ಪ್ರೀತಿಗೆ ಥ್ಯಾಂಕ್ಯೂ ಎಂದು ಹೇಳುತ್ತಾ ಮುನ್ನಡೆದರು. ಈ ವಿಡಿಯೋವೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ವಿರಾಟ್ ಕೊಹ್ಲಿ ಜತೆಗೆ ಕಾನ್ಪುರಕ್ಕೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಕೂಡಾ ಬಂದಿಳಿದರು. ಬಾಂಗ್ಲಾದೇಶ ಎದುರಿನ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್‌ನಲ್ಲಿ 6 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 17 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಕಾನ್ಪುರ ಟೆಸ್ಟ್‌ನಲ್ಲಿ ಫಾರ್ಮ್‌ಗೆ ಮರಳಲು ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.