ಟೀಂ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ತಮ್ಮ ಸಾಕು ನಾಯಿಗೆ ಗಾಬಾ ಎಂದು ಹೆಸರಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಚೆನ್ನೈ(ಏ.03): ಭಾರತ ತಂಡದ ಯುವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ತಮ್ಮ ಸಾಕು ಶ್ವಾನಕ್ಕೆ ‘ಗಾಬಾ’ ಎಂದು ಬ್ರಿಸ್ಬೇನ್‌ನ ಕ್ರಿಕೆಟ್ ಕ್ರೀಡಾಂಗಣದ ಹೆಸರಿಟ್ಟಿದ್ದಾರೆ.
ಈ ವರ್ಷ ಜನವರಿಯಲ್ಲಿ ಆಸ್ಪ್ರೇಲಿಯಾ ವಿರುದ್ಧ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ವಾಷಿಂಗ್ಟನ್, ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿ ಭಾರತ ಐತಿಹಾಸಿಕ ಸರಣಿ ಗೆಲುವು ಸಾಧಿಸಲು ನೆರವಾಗಿದ್ದರು. ಆ ನೆನಪಿನಲ್ಲಿ ತಮ್ಮ ಸಾಕು ಶ್ವಾನಕ್ಕೆ ಕ್ರೀಡಾಂಗಣದ ಹೆಸರಿಟ್ಟಿರುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಖುಷಿ ಹಂಚಿಕೊಂಡಿದ್ದಾರೆ.
undefined
ಗಾಬಾ ಮೈದಾನದಲ್ಲಿ ನಡೆದ ಮೊದಲ ಇನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 3 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇದರೊಂದಿಗೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ಕೇವಲ 369 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇದಾದ ಬಳಿಕ ಭಾರತ ಒಂದು ಹಂತದಲ್ಲಿ 186 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗಿಳಿದ ಸುಂದರ್ 7ನೇ ವಿಕೆಟ್‌ಗೆ ಶಾರ್ದೂಲ್ ಠಾಕೂರ್ ಜತೆ 7ನೇ ವಿಕೆಟ್‌ಗೆ 123 ರನ್‌ಗಳ ಜತೆಯಾಟ ನಿಭಾಯಿಸಿದರು. ಸುಂದರ್ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ 62 ರನ್ ಬಾರಿಸಿದರೆ, ಎರಡನೇ ಇನಿಂಗ್ಸ್‌ನಲ್ಲಿ 328 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತಕ್ಕೆ ಚುರುಕಿನ 22 ರನ್ ಬಾರಿಸುವ ಮೂಲಕ ಭಾರತದ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
IPL 2020: ಈತನನ್ನು ಕೈಬಿಟ್ಟು ಆರ್‌ಸಿಬಿ ದೊಡ್ಡ ತಪ್ಪು ಮಾಡಿತು ಎಂದ ಪಾರ್ಥಿವ್ ಪಟೇಲ್..!
4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಭಾರತ ಆ ಬಳಿಕ ಕಾಂಗರೂ ಪಡೆಗೆ ತಿರುಗೇಟು ನೀಡಿ 2-1 ಅಂತರದಲ್ಲಿ ಟೆಸ್ಟ್ ಸರಣಿ ಜಯಿಸಿ ಅಬ್ಬರಿಸಿತ್ತು.