* ಕೋವಿಡ್ ಸೋಂಕಿತ ರೋಗಿಗೆ ನೆರವಾದ ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್
* ಬೆಂಗಳೂರಿನ ರೋಗಿಗೆ 2 ಲಕ್ಷ ರುಪಾಯಿ ದೇಣಿಗೆ ನೀಡಿದ ಆರ್‌ಸಿಬಿ ಸ್ಪಿನ್ನರ್
* ಈ ಹಿಂದೆಯೂ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಿರುವ ಲೆಗ್‌ಸ್ಪಿನ್ನರ್
ನವದೆಹಲಿ(ಮೇ.15): ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಗೆ ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್ 2 ಲಕ್ಷ ರುಪಾಯಿ ನೆರವು ನೀಡಿದ್ದಾರೆ.
ವೆಂಟಿಲೇಟರ್ ಸಹಾಯ ಪಡೆದಿರುವ ಆಕೆಯ ಚಿಕಿತ್ಸೆಗೆ ಅಂದಾಜು 4 ಲಕ್ಷ ರು. ಖರ್ಚಾಗಿದ್ದು, ಅದರಲ್ಲಿ ಅರ್ಧದಷ್ಟು ಮೊತ್ತವನ್ನು ಚಹಲ್ ನೀಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಗೆ ನೆರವಾಗಲು ಆಕೆಯ ಪರಿಚಯಸ್ಥರಿಂದ ಆನ್‌ಲೈನ್‌ನಲ್ಲಿ ಕೆಟ್ಟೋ ಸಹಭಾಗಿತ್ವದಲ್ಲಿ ಹಣ ಸಂಗ್ರಹ ನಡೆಸಲಾಗುತ್ತಿದೆ. ಚಹಲ್‌ಗೆ ಸ್ನೇಹಿತರೊಬ್ಬರಿಂದ ಈ ವಿಷಯ ತಿಳಿದಿದ್ದು ಕೆಟ್ಟೋ ಮೂಲಕ 2 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.
undefined
ಒಂದು ವಾರದಲ್ಲಿ 11 ಕೋಟಿ ರೂ ದೇಣಿಗೆ ಸಂಗ್ರಹಿಸಿದ ವಿರುಷ್ಕಾ ಜೋಡಿ..!
ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಒಂದು ವಾರದಲ್ಲಿ 7 ಕೋಟಿ ರುಪಾಯಿ ಸಂಗ್ರಹಿಸುವ ಗುರಿಯೊಂದಿಗೆ ತಮ್ಮ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನಕ್ಕೆ ಯುಜುವೇಂದ್ರ ಚಹಲ್ 95 ಸಾವಿರ ರುಪಾಯಿ ದೇಣಿಗೆ ನೀಡಿದ್ದರು. ವಿರುಷ್ಕಾ ಜೋಡಿಯ ಈ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದು, 11 ಕೋಟಿಗೂ ಅಧಿಕ ಮೊತ್ತದ ಹಣ ಹರಿದು ಬಂದಿತ್ತು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona