* ಕೋವಿಡ್ ಲಸಿಕೆ ಪಡೆದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ
* ಬುಮ್ರಾ ಜತೆಗೆ ಮಂಧನಾ ಹಾಗೂ ದಿನೇಶ್ ಕಾರ್ತಿಕ್ ಕೂಡಾ ಲಸಿಕೆ ಸ್ವೀಕಾರ
* ಎಲ್ಲರೂ ಲಸಿಕೆ ಪಡೆದು ಸುರಕ್ಷಿತವಾಗಿರಿ ಎಂದು ಸಂದೇಶ ರವಾನೆ
ಮುಂಬೈ(ಮೇ.12): ಭಾರತ ಕ್ರಿಕೆಟ್ ತಂಡದ ತಾರಾ ವೇಗಿ ಜಸ್ಪ್ರೀತ್ ಬುಮ್ರಾ ಮಂಗಳವಾರ ಕೊರೋನಾ ಲಸಿಕೆ ಮೊದಲ ಡೋಸ್ ಹಾಕಿಸಿಕೊಂಡರು. ಅಲ್ಲದೇ ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.
ನಾನು ಲಸಿಕೆ ಹಾಕಿಸಿಕೊಂಡಿದ್ದೇನೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಬುಮ್ರಾ ಟ್ವೀಟ್ ಮಾಡಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧನಾ ಸಹಾ ಮೊದಲ ಹಂತದ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.
Vaccinated. Please stay safe everyone. pic.twitter.com/8ZrclDh2LI
— Jasprit Bumrah (@Jaspritbumrah93)Vaccinated ✅ pic.twitter.com/xu6XtGa5k5
— DK (@DineshKarthik)
undefined
ಇಂಗ್ಲೆಂಡ್ ಪ್ರವಾಸದಲ್ಲಿ ಬುಮ್ರಾ, ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್‌ಗೆ ತೆರಳಲಿರುವ ತಂಡದಲ್ಲಿರುವ ಆಟಗಾರರ ಪೈಕಿ ನಾಯಕ ಕೊಹ್ಲಿ, ಉಪನಾಯಕ ರಹಾನೆ, ಪೂಜಾರ, ಉಮೇಶ್ ಯಾದವ್ ಹಾಗೂ ಇಶಾಂತ್ ಶರ್ಮಾ ಈಗಾಗಲೇ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದ ಆಟಗಾರರು ಸದ್ಯದಲ್ಲೇ ಲಸಿಕೆ ಪಡೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕೋವಿಡ್ ಲಸಿಕೆ ಪಡೆದು ಮಹತ್ವದ ಸಂದೇಶ ಸಾರಿದ ವಿರಾಟ್ ಕೊಹ್ಲಿ..!
ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದರು. ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಬುಮ್ರಾ ಸಜ್ಜಾಗುತ್ತಿದ್ದು, ಜೂನ್ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಭಾರತ ತಂಡವು ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona