ಬಾರ್ಡರ್-ಗವಾಸ್ಕರ್ ಟ್ರೋಫಿ: ಪರ್ತ್‌ನಲ್ಲಿ ಟೀಂ ಇಂಡಿಯಾ ಕಠಿಣ ಅಭ್ಯಾಸ!

By Naveen Kodase  |  First Published Nov 14, 2024, 10:50 AM IST

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ, ಆಸೀಸ್ ನೆಲದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದೆ. ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ. 


ಪರ್ತ್: ಆಸ್ಟ್ರೇಲಿಯಾ ವಿರುದ್ದ ನವೆಂಬರ್ 22ರಿಂದ ಆರಂಭಗೊಳ್ಳಲಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಮಂಗಳವಾರವೇ ನೆಟ್ಸ್ ಅಭ್ಯಾಸ ಆರಂಭಿಸಿದ್ದ ಟೀಂ ಇಂಡಿಯಾ ಆಟಗಾರರು, ಬುಧವಾರವೂ ಕೆಲ ಗಂಟೆಗಳ ಕಾಲ ನೆಟ್‌ನಲ್ಲಿ ಬೆವರಿಳಿಸಿದರು.

ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಶುಭ್ ಮನ್ ಗಿಲ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಬ್ಯಾಟಿಂಗ್ ಅಭ್ಯಾಸ ನಡೆಸಿದರೆ, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್‌ ಸಿರಾಜ್, ಆಕಾಶ್‌ ದೀಪ್ ಸಿಂಗ್, ಆರ್.ಅಶ್ವಿನ್, ವಾಷಿಂಗ್ಟನ್ ಸುಂದರ್ ಬೌಲ್ ಮಾಡಿದರು. 

Tap to resize

Latest Videos

undefined

ರಣಜಿ ಟ್ರೋಫಿ: ವಾಸುಕಿ ಕೌಶಿಕ್ ವೇಗಕ್ಕೆ ಉತ್ತರ ಪ್ರದೇಶ ತತ್ತರ!

ಮುಂಬೈನಲ್ಲೇ ರೋಹಿತ್ ಅಭ್ಯಾಸ: 2ನೇ ಮಗುವಿನ ನಿರೀಕ್ಷೆಯಲ್ಲಿರುವ ನಾಯಕ ರೋಹಿತ್‌ ಶರ್ಮಾ ಇನ್ನೂ ಆಸ್ಟ್ರೇಲಿಯಾಗೆ ತೆರಳಿಲ್ಲ. ಮೊದಲ ಟೆಸ್ಟ್‌ಗೆ ಅವರು ಗೈರಾಗುವುದು ಬಹುತೇಕ ಖಚಿತವಾಗಿದ್ದು, ರೋಹಿತ್ ಮುಂಬೈನಲ್ಲೇ ಅಭ್ಯಾಸ ನಡೆಸುತ್ತಿದ್ದಾರೆ. ಅವರು ಆಸ್ಟ್ರೇಲಿಯಾ ಪ್ರಯಾಣ ದಿನಾಂಕ ಇನ್ನೂ ನಿಗದಿಯಾಗಿಲ್ಲ.

There’s bounce ☄️
There’s pace ⚡️
And there is the age-old rivalry 👌
Australia, we have arrived! 🙌

WATCH 🎥🔽 - By | | https://t.co/a8LE2FIHtz

— BCCI (@BCCI)

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪರ್ತ್‌ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ ಎನ್ನುವ ಸುಳಿವನ್ನು ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಬಿಟ್ಟುಕೊಟ್ಟಿದ್ದಾರೆ. ಇನ್ನು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ನಾಯಕನಾಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನುವುದನ್ನು ಗಂಭೀರ್ ಖಚಿತಪಡಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪರ್ತ್ ಟೆಸ್ಟ್‌ ಬಳಿಕ ಡಿಸೆಂಬರ್ 06ರಿಂದ ಅಡಿಲೇಡ್ ಓವಲ್ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಡಿಸೆಂಬರ್ 14ರಿಂದ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯವು ನಡೆದರೆ, ಡಿಸೆಂಬರ್ 26ರಿಂದ ಐತಿಹಾಸಿಕ ಮೆಲ್ಬೊರ್ನ್ ಸ್ಟೇಡಿಯಂನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ನಡೆಯಲಿದೆ. 

ತಿಲಕ್ ವರ್ಮಾ ಭರ್ಜರಿ ಸೆಂಚುರಿ, ಹರಿಣಗಳೆದುರು ಭಾರತ ಜಯಭೇರಿ!

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ ತಂಡ: 

ರೋಹಿತ್‌ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಸರ್ಫರಾಜ್‌ ಖಾನ್‌, ಧೃವ್‌ ಜುರೆಲ್‌, ಆರ್.ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್‌, ಆಕಾಶ್‌ದೀಪ್‌, ಪ್ರಸಿದ್ಧ್‌ ಕೃಷ್ಣ, ಹರ್ಷಿತ್‌ ರಾಣಾ, ನಿತೀಶ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌.

click me!