2ನೇ ಟಿ20 ಪಂದ್ಯ; ಮಳೆ ಭೀತಿ ನಡುವೆ ಟಾಸ್; ಭಾರತ ಫೀಲ್ಡಿಂಗ್!

By Web DeskFirst Published Nov 7, 2019, 6:34 PM IST
Highlights

ಬಾಂಗ್ಲಾದೇಶ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾದ ಬದಲಾವಣೆಗಳೇನು? ಇಲ್ಲಿದೆ ವಿವರ.

ರಾಜ್‌ಕೋಟ್(ನ.07): ಮಹಾ ಚಂಡಮಾರುತ ಭೀತಿ ನಡುವೆಯೇ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿರುವ ಭಾರತ, ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ಹಾಗೂ ಬಾಂಗ್ಲಾದೇಶ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 

ಇದನ್ನೂ ಓದಿ: 2ನೇ ಟಿ20 ಪಂದ್ಯದ ಹವಾಮಾನ ವರದಿ; ರೋಹಿತ್ ಸೈನ್ಯಕ್ಕೆ ಸೈಕ್ಲೋನ್ ಭೀತಿ!

ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧದ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಸರಣಿಯಲ್ಲಿ 0-1 ಅಂತರದ ಹಿನ್ನಡೆ ಅನುಭವಿಸಿದೆ. ಇತ್ತ ಬಾಂಗ್ಲಾದೇಶ 2ನೇ ಪಂದ್ಯ ಗೆದ್ದು ಸರಣಿ ಗೆಲ್ಲೋ ಪ್ಲಾನ್‌ನಲ್ಲಿದೆ. ಈ ಮೂಲಕ ಹೊಸ ಇತಿಹಾಸ ರಚಿಸಲು ಮುಂದಾಗಿದೆ.

ನಾಯಕ ರೋಹಿತ್ ಶರ್ಮಾ ಪಾಲಿಗೆ ಇದು 100 ಟಿ20 ಪಂದ್ಯವಾಗಿದೆ. ಟಿ20ಯಲ್ಲಿ ಶತಕ ಪಂದ್ಯ ಆಡಿದ ಮೊದಲ ಭಾರತೀಯ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವದ 2ನೇ ಕ್ರಿಕೆಟಿಗ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ. ಪಾಕಿಸ್ತಾನದ ಶೋಯೆಬ್ ಮಲಿಕ್ 111 ಟಿ20 ಪಂದ್ಯ ಆಡಿ ಮೊದಲ ಸ್ಥಾನದಲ್ಲಿದ್ದಾರೆ.

 
 

click me!