
ಮೌಂಟ್ ಮಾಂಗನ್ಯುಯಿ(ಫೆ.02): ವಿಶ್ವಕಪ್ ವರ್ಷದಲ್ಲಿ ಅಮೋಘ ಲಯದಲ್ಲಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ 5 ಟಿ20 ಪಂದ್ಯಗಳ ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ.
ಮತ್ತೆ ಸೂಪರ್ ಓವರ್ ಗೆದ್ದ ಟೀಂ ಇಂಡಿಯಾ
ಸತತ 2 ಪಂದ್ಯಗಳನ್ನು ಸೂಪರ್ ಓವರ್‌ನಲ್ಲಿ ಗೆದ್ದು ಸರಣಿಯಲ್ಲಿ 4-0 ಮುನ್ನಡೆ ಹೊಂದಿರುವ ಭಾರತ ಇನ್ನೂ ಕೆಲ ಪ್ರಯೋಗಗಳನ್ನು ಮಾಡುವ ನಿರೀಕ್ಷೆ ಇದೆ. ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡು ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ರಾಹುಲ್, ಬುಮ್ರಾ, ಚಹಲ್ ಸಹ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ರಿಷಭ್ ಪಂತ್, ಶಮಿ ಹಾಗೂ ಕುಲ್ದೀಪ್ ಆಡಬಹುದು.
INDvNZ 5ನೇ ಟಿ20: ಬದಲಾವಣೆಗೆ ಮುಂದಾದ ಭಾರತ! ಇಲ್ಲಿದೆ ಸಂಭವನೀಯ ತಂಡ!
ನ್ಯೂಜಿಲೆಂಡ್ ಇದುವರೆಗೂ ತವರಿನಲ್ಲಿ ಆಡಿದ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನೂ ಸೋತಿಲ್ಲ. ಕೊನೆ ಪಂದ್ಯದಲ್ಲಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಹೋರಾಡಲಿದೆ.
ಪಂದ್ಯ ಆರಂಭ: ಮಧ್ಯಾಹ್ನ 12.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 1
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.