ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಮೇಲೆ ಲೈಂಗಿಕ ಕಿರುಕುಳ ಆರೋಪ!

Suvarna News   | Asianet News
Published : Mar 22, 2020, 05:27 PM ISTUpdated : Mar 23, 2020, 11:50 AM IST
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಮೇಲೆ ಲೈಂಗಿಕ ಕಿರುಕುಳ ಆರೋಪ!

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಮೇಲೆ ಮಹಿಳಾ ಕ್ರಿಕೆಟ್ ಆಟಗಾರ್ತಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಳೆ. ಪ್ರಕರಣ ಪೊಲೀಸ್ ಮೆಟ್ಟಿಲೇರುತ್ತಿದ್ದಂತೆ ಬಿಸಿಸಿಐ ಮಾಜಿ ಕ್ರಿಕೆಟಿಗನ ಮೇಲೆ ಕ್ರಮ ಕೈಗೊಂಡಿದೆ.  

ಬರೋಡಾ(ಮಾ.22): ಟೀಂ ಇಂಡಿಯಾ ಮಾಜಿ ಬ್ಯಾಟ್ಸ್‌ಮನ್, ಬರೋಡಾ ಮಹಿಳಾ ಕ್ರಿಕೆಟ್ ತಂಡದ ಕೋಚ್ ಅತುಲ್ ಬೆಡದೆ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಬರೋಡಾ ಮಹಿಳಾ ಕ್ರಿಕೆಟ್ ಆಟಗಾರ್ತಿ ಅತುಲ್ ವಿರುದ್ಧ ಆರೋಪ ಮಾಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಬರೋಡಾ ರಾಜ್ಯ ಕ್ರಿಕೆಟ್ ಸಂಸ್ಥೆ ಬರೋಡಾ ಮಹಿಳಾ ತಂಡದ ಕೋಚ್ ಹುದ್ದೆಯಿಂದ ಅತುಲ್‌ರನ್ನು ಅಮಾನತು ಮಾಡಿದೆ.

2020 ಐಪಿಎಲ್ ಟೂರ್ನಿ ನಡೆಯುತ್ತಾ? ಅಂತಿಮ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ರೆಡಿ

ಹಿಮಾಚಲ ಪ್ರದೇಶದಲ್ಲಿ ನಡೆದ ಟೂರ್ನಿ ವೇಳೆ ಕೋಚ್ ಅತುಲ್ ಬಿಡದೆ ತನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಲೈಂಗಿಕವಾಗಿ ಬಳಸಿಕೊಳ್ಳುವ ಯತ್ನ ಮಾಡುವುದರ ಜೊತೆಗೆ ಸಾರ್ವಜನಿಕವಾಗಿ ಅಮಾನಿಸಿದ್ದಾರೆ ಎಂದು ಬರೋಡಾ ಕ್ರಿತೆಟ್ ಸಂಸ್ಥೆ ದೂರು ನೀಡಿದ್ದಾರೆ.  ಪ್ರಾಥಮಿಕ ವರದಿ ಆಧರಿಸಿ ಅತುಲ್‌ಗೆ ಅಮಾನತು ಶಿಕ್ಷೆ ನೀಡಲಾಗಿದೆ.

ಕೊರೋನಾ ವೈರಸ್‌ಗೆ ಬಲಿಯಾದ ರಿಯಲ್ ಮ್ಯಾಡ್ರಿಡ್ ಮಾಜಿ ಅಧ್ಯಕ್ಷ ಲೊರೆಂಝೋ!

ಪ್ರಕರಣವನ್ನು ಬರೋಡಾ ಕ್ರಿಕೆಟ್ ಸಂಸ್ಥೆಯ ಕಮಿಟಿ ತನಿಖೆ ನಡೆಸುತ್ತಿದೆ. 53 ವರ್ಷದ ಅತುಲ್ ಬಿಡದೆ ಭಾರತದ ಪರ 13 ಏಕದಿನ ಪಂದ್ಯ ಆಡಿದ್ದಾರೆ. 1994ರಲ್ಲಿ ಭಾರತ ತಂಡ ಪ್ರತಿನಿದಿಸಿದ್ದ ಅತುಲ್, ಬ್ಯಾಟ್ಸ್‌ಮನ್ ಆಗಿ ಮಿಂಚಿದ್ದರು. ವಿದಾಯದ ಬಳಿಕ ಕೋಚಿಂಗ್ ತರಬೇತಿ ಪಡೆದ ಅತುಲ್, ಬರೋಡಾ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅಮಾನತುಗೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ