ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ತಟ್ಟಿದ ಕೊರೋನಾ, ಶೀಘ್ರ ಚೇತರಿಕೆಗೆ ಪ್ರಾರ್ಥನೆ!

Published : Jul 12, 2020, 05:24 PM ISTUpdated : Jul 12, 2020, 05:27 PM IST
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ತಟ್ಟಿದ ಕೊರೋನಾ, ಶೀಘ್ರ ಚೇತರಿಕೆಗೆ ಪ್ರಾರ್ಥನೆ!

ಸಾರಾಂಶ

ಕೊರೋನಾ ವೈರಸ್ ಭಾರತದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಸೆಲೆಬ್ರೆಟಿಗಳು, ಕ್ರೀಡಾಪಟುಗಳನ್ನು ಕೊರೋನಾ ಬಿಡುತ್ತಿಲ್ಲ. ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೂ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. 

ಲಕ್ನೋ(ಜು.12):  ಕೊರೋನಾ ವೈರಸ್ ದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ನಗರ, ಜಿಲ್ಲೆ, ಗ್ರಾಮ, ಹಳ್ಳಿ ಸೇರಿದಂತೆ ಎಲ್ಲೆಡೆ ವ್ಯಾಪಿಸಿದೆ. ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಯಾರನ್ನೂ ಕೊರೋನಾ ಬಿಡುತ್ತಿಲ್ಲ. ಬಾಲಿವುಡ್ ಸೆಲೆಬ್ರೆಟಿಗಳಾದ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಪುತ್ರಿ ಆರಾಧ್ಯಗೂ ಕೊರೋನಾ ವೈರಸ್ ದೃಢಪಟ್ಟಿದೆ. ಇದರ ಬೆನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಚೇತನ್ ಚವ್ಹಾಣ್‌ಗೆ ಕೊರೋನಾ ವೈರಸ್ ತಗುಲಿರುವುದು ಖಚಿತವಾಗಿದೆ.

2021ರ ಜೂನ್‌ವರೆಗೂ ಏಷ್ಯಾ​ಕಪ್‌ ಮುಂದೂ​ಡಿ​ಕೆ..! ಐಪಿಎಲ್ ಆಯೋಜನೆಗೆ ಮರುಜೀವ

ಮಾಜಿ ಕ್ರಿಕೆಟಿಗ, ಉತ್ತರ ಪ್ರದೇಶದ ಕ್ಯಾಬಿನೆಟ್ ಸಚಿವರಾಗಿರುವ 72 ವರ್ಷದ ಚೇತನ್ ಚವ್ಹಾಣ್ ಆಸ್ಪತ್ರೆ ದಾಖಲಾಗಿದ್ದಾರೆ. ಶುಕ್ರವಾರ ಕೊರೋನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡ ಕಾರಣ ಪರೀಕ್ಷೆ ನಡೆಸಿದ್ದರು. ವರದಿಯಲ್ಲಿ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. 

ವಿರಾಟ್ ಕೊಹ್ಲಿ ಮೇಲೆ ಸ್ವಹಿತಾಸಕ್ತಿ ಆರೋಪ; ಬಿಸಿಸಿಐಗೆ ಪತ್ರ!.

ಚೇತನ್ ಚವ್ಹಾಣ್ ಕುಟುಂಬ ಸದಸ್ಯರಿಗೂ ಇದೀಗ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಚೇತನ್ ಚವ್ಹಾಣ್‍ಗೆ ಕೊರೋನಾ ವೈರಸ್ ಕಾಣಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಕ್ರಿಕೆಟ್‌ಗೆ ಭೀತಿ ತಟ್ಟಿದೆ.

1969ರಿಂದ 1978ರ ವರೆಗೆ ಚೇತನ್ ಚವ್ಹಾಣ್ ಭಾರತದ ಪರ 40 ಟೆಸ್ಟ್ ಪಂದ್ಯ ಆಡಿದ್ದಾರೆ. ಟೆಸ್ಟ್ ಮಾದರಿಯಲ್ಲಿ 2,084 ರನ್ ಸಿಡಿಸಿದ್ದಾರೆ. ಇನ್ನು 7 ಏಕದಿನ ಪಂದ್ಯದಿಂದ 153 ರನ್ ದಾಖಲಿಸಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!