ಇಂಜುರಿ ರೋಹಿತ್ ಶರ್ಮಾ ವೈದ್ಯಕೀಯ ರಿಪೋರ್ಟ್ ಬಹಿರಂಗ!

Published : Nov 02, 2019, 03:34 PM IST
ಇಂಜುರಿ ರೋಹಿತ್ ಶರ್ಮಾ ವೈದ್ಯಕೀಯ ರಿಪೋರ್ಟ್ ಬಹಿರಂಗ!

ಸಾರಾಂಶ

ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮೊದಲು ನಡೆದ ಅಭ್ಯಸದಲ್ಲಿ ರೋಹಿತ್ ಶರ್ಮಾ ಗಾಯಗೊಂಡು ಹೊರನಡೆದಿದ್ದರು. ಇದೀಗ ರೋಹಿತ್ ವೈದ್ಯಕೀಯ ವರದಿ ಬಹಿರಂಗಗೊಂಡಿದೆ.

ನವದೆಹಲಿ(ನ.02): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯಕ್ಕೆ ಬಿಸಿಸಿಐ ಎಲ್ಲಾ ತಯಾರಿ ಮಾಡಿಕೊಂಡಿದೆ. ದೆಹಲಿ ಮಾಲಿನ್ಯದಿಂದ ಪಂದ್ಯ ಸ್ಥಳಾಂತರಿಸೋ ಒತ್ತಡ ಕೇಳಿ ಬಂದಿದ್ದರೂ ಬಿಸಿಸಿಐ ದೆಹಲಿಯಲ್ಲೇ ಮುಂದಾಗಿದೆ. ಮೊದಲ ಟಿ20 ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದ ನಾಯಕ ರೋಹಿತ್ ಶರ್ಮಾ ಇಂಜುರಿಗೆ ತುತ್ತಾಗಿದ್ದರು. ಇದೀಗ ರೋಹಿತ್ ಗಾಯದ ವೈದ್ಯಕೀಯ ವರದಿ ಬಹಿರಂಗವಾಗಿದೆ.

ಇದನ್ನೂ ಓದಿ: ಅಭ್ಯಾಸದ ವೇಳೆ ರೋಹಿತ್ ಗೆ ಗಾಯ: ಮುಂದೇನು..?

ಅಭ್ಯಾಸದ ವೇಳೆ ರೋಹಿತ್ ಶರ್ಮಾಗೆ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಥ್ರೋಡೌನ್ ಮಾಡುತ್ತಿದ್ದ ವೇಳೆ ಗಾಯಗೊಂಡಿದ್ದರು. ತಕ್ಷಣವೇ ರೋಹಿತ್ ಶರ್ಮಾ ಅಭ್ಯಾಸ ಮೊಟಕುಗೊಳಿಸಿ ವಾಪಾಸ್ಸಾಗಿದ್ದರು. ಇದೀಗ ವೈದ್ಯಕೀಯ ವರದಿ ಬಹಿರಂಗವಾಗಿದೆ. ರೋಹಿತ್ ಶರ್ಮಾ ಮೊದಲ ಪಂದ್ಯ ಆಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇದನ್ನೂ ಓದಿ: ಮಾಸ್ಕ್ ಧರಿಸಿದ ಬಾಂಗ್ಲಾ ತಂಡ; ದೆಹಲಿ ಸಿಎಂ ಕೇಜ್ರಿವಾಲ್ ತಿವಿದ ಗಂಭೀರ್!

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಲಭ್ಯವಿರುವುದಾಗಿ ಟೀಂ ಮ್ಯಾನೇಜ್ಮೆಂಟ್ ಸ್ಪಷ್ಟಪಡಿಸಿದೆ. ರೋಹಿತ್ ಫಿಟ್ ಆಗಿದ್ದು, ತಂಡ ಮುನ್ನಡೆಸಲಿದ್ದಾರೆ ಎಂದಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?