
ದುಬೈ[ಅ.24]: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ, ಬುಧವಾರ ನೂತನವಾಗಿ ಬಿಡುಗಡೆಯಾದ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 12 ಸ್ಥಾನಗಳ ಏರಿಕೆ ಕಂಡು, 10ನೇ ಸ್ಥಾನ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಅಗ್ರ 10ರೊಳಗೆ ಸ್ಥಾನ ಪಡೆಯುವ ಮೂಲಕ ರೋಹಿತ್ ಹೊಸ ದಾಖಲೆ ಬರೆದಿದ್ದಾರೆ. ರೋಹಿತ್ ಜತೆ ನಾಯಕ ವಿರಾಟ್ ಕೊಹ್ಲಿ ಕೂಡಾ ಅಪರೂಪದ ದಾಖಲೆಗೆ ಭಾಜನರಾಗಿದ್ದಾರೆ.
ಟೆಸ್ಟ್ ರ‍್ಯಾಂಕಿಂಗ್: ಸ್ಮಿತ್ ಹಿಂದಿಕ್ಕಲು ಕೊಹ್ಲಿಗೆ ಇನ್ನೊಂದೆ ಹೆಜ್ಜೆ ಬಾಕಿ..!
ವಿರಾಟ್ ಕೊಹ್ಲಿಹಾಗೂ ಗೌತಮ್ ಗಂಭೀರ್ ಬಳಿಕ, ಎಲ್ಲಾ ಮೂರು ಮಾದರಿಯಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದ ಭಾರತೀಯ ಕ್ರಿಕೆಟಿಗ ಎನ್ನುವ ಹಿರಿಮೆಗೆ ರೋಹಿತ್ ಪಾತ್ರರಾಗಿದ್ದಾರೆ. ಇದರ ಜತೆಗೆ ಒಂದೇ ತಂಡದ ಇಬ್ಬರು ಬ್ಯಾಟ್ಸ್’ಮನ್’ಗಳು ಒಮ್ಮೆಲೆ ಮೂರು ಮಾದರಿಯಲ್ಲೂ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದ ಅಪರೂಪದ ಸಾಧನೆ ಮಾಡಿದ್ದಾರೆ.
INDvSA ಟೆಸ್ಟ್ ಸರಣಿಯಲ್ಲಿ ನಿರ್ಮಾಣವಾಯ್ತು ಹಲವು ದಾಖಲೆ!
ಕೊಹ್ಲಿ-ರೋಹಿತ್ ಅಪರೂಪದ ಸಾಧನೆ:
ಟೆಸ್ಟ್ ಕ್ರಿಕೆಟ್’ನಲ್ಲಿ ಕೊಹ್ಲಿ 2ನೇ ಸ್ಥಾನದಲ್ಲಿದ್ದರೆ, ರೋಹಿತ್ 10ನೇ ಸ್ಥಾನದಲ್ಲಿದ್ದಾರೆ. ಇನ್ನು ಏಕದಿನ ಕ್ರಿಕೆಟ್’ನಲ್ಲಿ ಕೊಹ್ಲಿ ಮೊದಲ ಸ್ಥಾನಲ್ಲಿದ್ದರೆ, ರೋಹಿತ್ ಎರಡನೇ ಸ್ಥಾನದಲ್ಲಿದ್ದಾರೆ. ಟಿ20 ಕ್ರಿಕೆಟ್’ನಲ್ಲಿ ರೋಹಿತ್ 7ನೇ ಸ್ಥಾನದಲ್ಲಿದ್ದರೆ, ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.
ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ರೋಹಿತ್‌ಗೆ ಬಂಪರ್..!
ದ.ಆಫ್ರಿಕಾ ವಿರುದ್ಧ ಸರಣಿ ಆರಂಭಕ್ಕೂ ಮುನ್ನ ರೋಹಿತ್ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ 44ನೇ ಸ್ಥಾನದಲ್ಲಿದ್ದರು. ವೈಜಾಗ್ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್’ನಲ್ಲಿ 2 ಶತಕ ಸಿಡಿಸಿದ್ದರು. ಇನ್ನು ರಾಂಚಿ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿ ಅಬ್ಬರಿಸಿದ್ದರು. ಇದರೊಂದಿಗೆ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ರ 10ರಲ್ಲಿ ನಾಲ್ವರು!
ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ನಾಲ್ವರು ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ 2ನೇ ಸ್ಥಾನ, ಚೇತೇಶ್ವರ್ ಪೂಜಾರ 4ನೇ ಸ್ಥಾನ ಕಾಯ್ದುಕೊಂಡರೆ, ಅಜಿಂಕ್ಯ ರಹಾನೆ 4 ಸ್ಥಾನಗಳ ಏರಿಕೆ ಕಂಡು 5ನೇ ಸ್ಥಾನ ಪಡೆದಿದ್ದಾರೆ. ರೋಹಿತ್ 10ನೇ ಸ್ಥಾನ ಪಡೆದಿದ್ದಾರೆ. ಮಯಾಂಕ್ ಅಗರ್‌ವಾಲ್ 18ನೇ ಸ್ಥಾನದಲ್ಲಿದ್ದು, ಅಗ್ರ 20ರಲ್ಲಿ ಭಾರತದ ಐವರು ಬ್ಯಾಟ್ಸ್ಮನ್ಗಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.