
ನವದೆಹಲಿ(ಫೆ): ಭಾರತ ಕ್ರಿಕೆಟ್ ತಂಡದ ಆಟಗಾರ ಅಶೋಕ್ ದಿಂಡಾ, ಮೂರು ಮಾದರಿಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.
ಭಾರತ ತಂಡವನ್ನು ಪ್ರತಿನಿಧಿಸಬೇಕು ಎನ್ನುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ನಾನು ಬಂಗಾಳ ತಂಡದ ಪರ ಉತ್ತಮ ಪ್ರದರ್ಶನ ತೋರಿದ್ದರಿಂದ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿತು. ನನಗೆ ಭಾರತ ತಂಡದ ಪರ ಆಡಲು ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಬಂಗಾಳ ತಂಡದ ಪರ ಆಡುವಾಗ ಹಿರಿಯ ಆಟಗಾರರಾದ ದೀಪ್‌ದಾಸ್ ಗುಪ್ತಾ, ರೋಹನ್ ಗವಾಸ್ಕರ್ ಅವರಂತಹ ಹಿರಿಯ ಆಟಗಾರರು ನನಗೆ ಸಲಹೆ ನೀಡುತ್ತಿದ್ದರು. ನಾನು ವಿಕೆಟ್ ಪಡೆದಾಗಲೆಲ್ಲ ನನ್ನನ್ನು ಹುರಿದುಂಬಿಸುತ್ತಿದ್ದರು ಎಂದು ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ದಿಂಡಾ ಹೇಳಿದ್ದಾರೆ.
ನಾನು ವಿಶೇಷವಾಗಿ ಸೌರವ್ ಗಂಗೂಲಿಗೆ ಧನ್ಯವಾದಗಳನ್ನು ಸಲ್ಲಿಸಬೇಕು. ನನಗಿನ್ನು ನೆನಪಿದೆ 2005-06ರಲ್ಲಿ ಸೌರವ್ ಗಂಗೂಲಿ ನನ್ನನ್ನು 16 ಆಟಗಾರರನ್ನೊಳಗೊಂಡ ಬಂಗಾಳ ತಂಡಕ್ಕೆ ಆಯ್ಕೆ ಮಾಡಿದರು. ಮಹಾರಾಷ್ಟ್ರ ವಿರುದ್ದ ನಾನು ಪಾದಾರ್ಪಣೆ ಮಾಡಿದೆ. ನಾನು ದಾದಾಗೆ ಯಾವತ್ತಿಗೂ ಚಿರಋಣಿ. ಅವರು ಯಾವತ್ತಿಗೂ ನನ್ನನ್ನು ಬೆಂಬಲಿಸುತ್ತಿದ್ದರು. ನಾನು ನಿವೃತ್ತಿ ಪಡೆಯಲು ಸಕಾಲ ಎಂದು ತೀರ್ಮಾನಿಸಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ದಿಂಡಾ ಹೇಳಿದ್ದಾರೆ.
ಇಂಡೋ-ಆಂಗ್ಲೋ ಟೆಸ್ಟ್: ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ ನಡುವೆ ಪೈಪೋಟಿ
ದಿಂಡಾ, ಭಾರತ ಪರ 13 ಏಕದಿನ, 9 ಟಿ20 ಪಂದ್ಯಗಳನ್ನಾಡಿ ಕ್ರಮವಾಗಿ 12 ಮತ್ತು 17 ವಿಕೆಟ್ ಕಬಳಿಸಿದ್ದರು. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯವನ್ನಾಡುವ ಮೂಲಕ ದಿಂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. 2013ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. 116 ಪ್ರಥಮ ದರ್ಜೆ ಪಂದ್ಯದಲ್ಲಿ ದಿಂಡಾ 420 ವಿಕೆಟ್ ಕಬಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.