4ನೇ ಟೆಸ್ಟ್‌ಗೆ ಬುಮ್ರಾ ಅಲಭ್ಯ: ಮದುವೆಗಾಗಿ ರಜೆ ಪಡೆದ ವೇಗಿ?

Suvarna News   | Asianet News
Published : Mar 03, 2021, 12:15 PM IST
4ನೇ ಟೆಸ್ಟ್‌ಗೆ ಬುಮ್ರಾ ಅಲಭ್ಯ: ಮದುವೆಗಾಗಿ ರಜೆ ಪಡೆದ ವೇಗಿ?

ಸಾರಾಂಶ

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 4ನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದು, ಸದ್ದಿಲ್ಲದೇ ವಿವಾಹಕ್ಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಅಹಮದಾಬಾದ್(ಮಾ.03)‌: ಟೀಂ ಇಂಡಿಯಾದ ವೇಗಿ ಜಸ್ಟ್ರೀತ್‌ ಬುಮ್ರಾ ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. 

27 ವರ್ಷದ ಬುಮ್ರಾ ಅವರ ವಿವಾಹ ನಿಶ್ಚಯವಾಗಿದ್ದು, ಇದರ ಸಿದ್ಧತೆಗಾಗಿ ಜಸ್ಪ್ರೀತ್ ಬುಮ್ರಾ ರಜೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಇನ್ನು ಪಿಂಕ್‌ ಬಾಲ್‌ ಟೆಸ್ಟ್‌ಗೆ ಬುಮ್ರಾ ಕಮ್‌ಬ್ಯಾಕ್‌ ಮಾಡಿದ್ದರಾದರೂ ವಿಕೆಟ್‌ ಕಬಳಿಸಲು ಸಫಲವಾಗಿರಲಿಲ್ಲ. 

ಪ್ರಸ್ತುತ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯಲ್ಲಿ 2 ಪಂದ್ಯಗಳನ್ನು ಆಡಿರುವ ಬುಮ್ರಾ, 4 ವಿಕೆಟ್‌ ಕಬಳಿಸಿದ್ದಾರೆ. ಇನ್ನು ಜಸ್ಪ್ರೀತ್‌ ಬುಮ್ರಾಗೆ ಇಂಗ್ಲೆಂಡ್‌ ವಿರುದ್ದದ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಿಂದಲೂ ವಿಶ್ರಾಂತಿ ದೊರೆಯುವ ಸಾಧ್ಯತೆಯಿದೆ. ಹೀಗಾದಲ್ಲಿ ಬುಮ್ರಾ 14ನೇ ಆವೃತ್ತಿಯ ಐಪಿಎಲ್ ವೇಳೆಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆಯಿದೆ.

ಟೀಂ ಇಂಡಿಯಾಗೆ ಎದುರಾಗಿದೆ ಮತ್ತೊಂದು ಚಿಂತೆ, ಏಕದಿನಕ್ಕೂ ಬುಮ್ರಾ ಅಲಭ್ಯ?

ಸದ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2-1ರಲ್ಲಿ ಮುನ್ನಡೆ ಸಾಧಿಸಿದ್ದು, ಮಾರ್ಚ್‌ 04ರಿಂದ ಆರಂಭವಾಗಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಇಲ್ಲವೇ ಡ್ರಾ ಸಾಧಿಸಿದರೆ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ