Ind vs Ban ಬಾಂಗ್ಲಾದೇಶ ವಿರುದ್ದ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಮೌನ ಮುರಿದ ಮೊಹಮ್ಮದ್ ಶಮಿ..!

By Naveena K VFirst Published Dec 3, 2022, 3:25 PM IST
Highlights

ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ
ಭಾರತ-ಬಾಂಗ್ಲಾದೇಶ ಎದುರಿನ ಏಕದಿನ ಸರಣಿ ಡಿಸೆಂಬರ್ 04ರಿಂದ ಆರಂಭ
ಗಾಯದಿಂದ ಚೇತರಿಸಿಕೊಂಡು ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವ ಸೂಚನೆ ನೀಡಿದ ಶಮಿ

ಬೆಂಗಳೂರು(ಡಿ.03): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ, ಭುಜದ ನೋವಿನ ಸಮಸ್ಯೆಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಶಮಿ ಬದಲಿಗೆ ಯುವ ವೇಗಿ ಉಮ್ರಾನ್ ಮಲಿಕ್ ಭಾರತ ತಂಡ ಕೂಡಿಕೊಂಡಿದ್ದಾರೆ. ಇನ್ನು ಏಕದಿನ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಶಮಿ, ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಮೌನ ಮುರಿದಿದ್ದು, ಮತ್ತೊಮ್ಮೆ ಬಲಿಷ್ಠವಾಗಿಯೇ ಕಮ್‌ಬ್ಯಾಕ್ ಮಾಡುವ ಸುಳಿವು ನೀಡಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಡಿಸೆಂಬರ್ 04ರಂದು  ಢಾಕಾ ಮೈದಾನದಲ್ಲಿ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಅನುಭವಿ ವೇಗಿ ಮೊಹಮ್ಮದ್ ಶಮಿ, ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿದ್ದು ರೋಹಿತ್ ಶರ್ಮಾ ಪಡೆಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. ಇನ್ನು ಬಿಸಿಸಿಐನ ಕೆಲ ಮೂಲಗಳ ಪ್ರಕಾರ, ಪಿಟಿಐ ವರದಿಯಂತೆ ಮೊಹಮ್ಮದ್ ಶಮಿ, ಬಾಂಗ್ಲಾದೇಶ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

"ವೇಗದ ಬೌಲರ್‌ ಮೊಹಮ್ಮದ್ ಶಮಿ, ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಅಭ್ಯಾಸ ನಡೆಸುವಾಗ ಭುಜದ ನೋವಿಗೆ ಒಳಗಾಗಿದ್ದಾರೆ. ಅವರೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬಿಸಿಸಿಐ ವೈದ್ಯಕೀಯ ಸಿಬ್ಬಂದಿಗಳ ನಿಗಾದಲ್ಲಿದ್ದಾರೆ. ಹೀಗಾಗಿ ಅವರು ಬಾಂಗ್ಲಾದೇಶ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಭಾರತ ತಂಡದ ಆಯ್ಕೆ ಸಮಿತಿಯು ಮೊಹಮ್ಮದ್ ಶಮಿ ಬದಲಿಗೆ ಉಮ್ರಾನ್ ಮಲಿಕ್ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ" ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

🚨 NEWS 🚨: Umran Malik to replace Mohd. Shami in India’s ODI squad for Bangladesh series. |

Details 🔽https://t.co/PsDfHmkiJs

— BCCI (@BCCI)

ಇದೀಗ ಬಾಂಗ್ಲಾದೇಶ ಎದುರಿನ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಟ್ವೀಟ್ ಮಾಡಿರುವ ಮೊಹಮ್ಮದ್ ಶಮಿ, "ಸಾಮಾನ್ಯವಾಗಿ, ಗಾಯಗಳು ನಮಗೆ ಪ್ರತಿಕ್ಷಣವನ್ನು ಗೌರವಿಸಲು ಪ್ರೋತ್ಸಾಹಿಸುತ್ತದೆ. ನಾನು ನನ್ನ ಜೀವನದುದ್ದಕ್ಕೂ ಸಾಕಷ್ಟು ಗಾಯಗಳನ್ನು ಎದುರಿಸಿದ್ದೇನೆ.  ಈ ಗಾಯಗಳಿಂದ ನಾನು ವಿನೀತನಾಗಿದ್ದೇನೆ. ಈ ಗಾಯಗಳು ನಮಗೆ ಹೊಸ ಒಳನೋಟಗಳನ್ನು ನೀಡುತ್ತವೆ. ನಾನೆಷ್ಟು ಬಾರಿ ಗಾಯಗೊಂಡಿದ್ದೇನೆ ಎನ್ನುವುದಕ್ಕಿಂತ, ನಾನು ಆ ಗಾಯದಿಂದ ಕಲಿತಿದ್ದೇ ಹೆಚ್ಚು ಹಾಗೂ ಹಿಂದೆಂದಿಗಿಂತಲೂ ಮತ್ತಷ್ಟು ಸದೃಢವಾಗಿಯೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Injury, in general, teaches you to appreciate every moment. I’ve had my share of injuries throughout my career. It’s humbling. It gives you perspective. No matter how many times I’ve been hurt, I’ve learned from that injury and come back even more stronger 💪🏻💪🏻💪🏻💪🏻💪🏻 pic.twitter.com/EsDLZd30Y7

— Mohammad Shami (@MdShami11)

Ind vs Ban ಬಾಂಗ್ಲಾದೇಶ ಏಕದಿನ ಸರಣಿಯಿಂದ ಹೊರಬಿದ್ದ ಶಮಿ, ಮಾರಕ ವೇಗಿ ಉಮ್ರಾನ್ ಮಲಿಕ್‌ಗೆ ಬುಲಾವ್..!

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಢಾಕಾದ ಮೀರ್‌ಪುರ್‌ ಕ್ರೀಡಾಂಗಣದಲ್ಲಿ ಡಿಸೆಂಬರ್ 4, ಡಿಸೆಂಬರ್ 7, ಡಿಸೆಂಬರ್ 10ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಡಿಸೆಂಬರ್ 14ರಿಂದ 18ರ ವರೆಗೂ ಛಟ್ಟೋಗ್ರಾಮ್‌ನಲ್ಲಿ ಮೊದಲ ಟೆಸ್ಟ್‌, ಡಿ.22ರಿಂದ 26ರ ವರೆಗೂ ಢಾಕಾದಲ್ಲಿ 2ನೇ ಟೆಸ್ಟ್‌ ನಡೆಯಲಿದೆ.

ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಭಾರತದ ಪರಿಷ್ಕೃತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶಹಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್ದೀಪ್ ಸೆನ್.

click me!