ದೇವರಿಗೆ ಮುಡಿಕೊಟ್ಟು ಹರಕೆ ತೀರಿಸಿದ ನಟರಾಜನ್‌

Suvarna News   | Asianet News
Published : Feb 01, 2021, 09:26 AM IST
ದೇವರಿಗೆ ಮುಡಿಕೊಟ್ಟು ಹರಕೆ ತೀರಿಸಿದ ನಟರಾಜನ್‌

ಸಾರಾಂಶ

ಟೀಂ ಇಂಡಿಯಾ ಯುವ ವೇಗದ ಬೌಲರ್‌ ಟಿ. ನಟರಾಜನ್‌ ತಮಿಳುನಾಡಿನ ಪಳನಿ ಮುರುಗ ದೇವಾಲಯಕ್ಕೆ ಭೇಟಿ ನೀಡಿ ಮುಡಿಕೊಟ್ಟು ಹರಕೆ ತೀರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚೆನ್ನೈ(ಫೆ.01): ಇತ್ತೀಚೆಗಷ್ಟೇ ಮುಕ್ತಾಯವಾದ ಆಸ್ಪ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ, ಅತ್ಯುತ್ತಮ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದ ವೇಗಿ ಟಿ. ನಟರಾಜನ್‌, ತಮಿಳುನಾಡಿನ ಪಳನಿ ಮುರುಗ ದೇವಾಲಯಕ್ಕೆ ಭೇಟಿ ನೀಡಿ ಮುಡಿಕೊಟ್ಟು ಹರಕೆ ತೀರಿಸಿದ್ದಾರೆ. 

ಟೀಂ ಇಂಡಿಯಾಗೆ ಆಯ್ಕೆಯಾದರೆ ಮುಡಿಕೊಡುವುದಾಗಿ ಅವರು ಹರಕೆ ಹೊತ್ತಿದ್ದರು ಎನ್ನಲಾಗಿದೆ. ನೆಟ್‌ ಬೌಲರ್‌ ಆಗಿ ಆಸ್ಟೇಲಿಯಾಗೆ ತೆರಳಿದ್ದ ನಟರಾಜನ್‌, ಮೂರು ಮಾದರಿಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಭಾರತದ ಮೊದಲ ಆಟಗಾರ ಎನ್ನುವ ದಾಖಲೆ ಬರೆದಿದ್ದರು.

ಪಾದಾರ್ಪಣೆ ಪಂದ್ಯದಲ್ಲೇ ಅಪರೂಪದ ದಾಖಲೆ ಬರೆದ ಟಿ ನಟರಾಜನ್‌

ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತು ಸರಣಿ ಕೈಚೆಲ್ಲಿದ ಬಳಿಕ ಮೂರನೇ ಏಕದಿನ ಪಂದ್ಯದಲ್ಲಿ ನಟರಾಜನ್‌ಗೆ ಏಕದಿನ ತಂಡದಲ್ಲಿ ಪಾದಾರ್ಪಣೆ ಮಾಡಿದರು. ಮೊದಲ ಪಂದ್ಯದಲ್ಲೇ 2  ವಿಕೆಟ್ ಕಬಳಿಸಿದ್ದರು. ಇನ್ನು ಟಿ20 ಸರಣಿಯಲ್ಲಿ 3 ಪಂದ್ಯಗಳನ್ನಾಡಿ 6 ವಿಕೆಟ್‌ ಕಬಳಿಸುವ ಮೂಲಕ ಟಿ20 ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಟೆಸ್ಟ್ ಸರಣಿಯಲ್ಲಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ 78 ರನ್‌ ನೀಡಿ 3 ವಿಕೆಟ್‌ ಕಬಳಿಸಿ ಗಮನ ಸೆಳೆದಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Mini Auction 2026: 1355 ಆಟಗಾರರಲ್ಲಿ 350 ಪ್ಲೇಯರ್ಸ್ ಶಾರ್ಟ್‌ಲಿಸ್ಟ್! ಇಲ್ಲಿದೆ ಹರಾಜಿನ ಕಂಪ್ಲೀಟ್ ಡೀಟೈಲ್ಸ್
ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!