INDvBAN 3ನೇ ಟಿ20: ಇದೊಂದು ಬದಲಾವಣೆಯಾದರೆ ಭಾರತಕ್ಕೆ ಗೆಲುವು ಪಕ್ಕಾ!

By Web Desk  |  First Published Nov 9, 2019, 5:27 PM IST

ಭಾರತ ಹಾಗೂ ಬಾಂಗ್ಲಾದೇಶ ನಡುವಿನ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿಯಾಗಿದೆ. ಸರಣಿ ವಶಪಡಿಸಿಕೊಳ್ಳಲು ಭಾರತ ಕಸರತ್ತು ನಡೆಸಿದೆ. ಅಂತಿಮ ಪಂದ್ಯದ ಗೆಲುವಿಗಾಗಿ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡೋ ಸಾಧ್ಯತೆ ಇದೆ.


ನಾಗ್ಪುರ(ನ.09): ಭಾರತಾದ್ಯಂತ ಅಯೋಧ್ಯೆ ತೀರ್ಪಿನ ಚರ್ಚೆ ನಡೆಯುತ್ತಿದೆ. ಆದರೆ ನಾಗ್ಪುರದಲ್ಲಿ ಟೀಂ ಇಂಡಿಯಾ ಕಠಿಣ ಅಭ್ಯಾಸದಲ್ಲಿ ನಿರತವಾಗಿದೆ.  ಭಾರತ ಹಾಗೂ ಬಾಂಗ್ಲಾದೇಶ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ. ನ.10 ರಂದು ನಡೆಯಲಿರುವ ಚುಟುಕು ಪಂದ್ಯದಲ್ಲಿ ಗೆದ್ದ ತಂಡ ಸರಣಿ ತನ್ನದಾಗಿಸಿಕೊಳ್ಳಲಿದೆ.

ಇದನ್ನೂ ಓದಿ: ರೋಹಿತ್ ಅಬ್ಬರಕ್ಕೆ ತತ್ತರಿಸಿದ ಬಾಂಗ್ಲಾ; ಭಾರತಕ್ಕೆ 8 ವಿಕೆಟ್ ಭರ್ಜರಿ ಗೆಲುವು!

Tap to resize

Latest Videos

ಮೊದಲ ಪಂದ್ಯದಲ್ಲಿ ಭಾರತ ಮುಗ್ಗರಿಸಿದರೆ, 2ನೇ ಪಂದ್ಯದಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿತ್ತು.  ಈ ಮೂಲಕ ಸರಣಿಯನ್ನು 1-1 ಅಂತರದಲ್ಲಿ ಸಮಬಲ ಮಾಡಿತ್ತು. ಇದೀಗ 3ನೇ ಪಂದ್ಯದಲ್ಲೂ ಗೆಲುವು ಸಾಧಿಸಿ ಸರಣಿ ಗೆಲ್ಲಲು ರೋಹಿತ್ ಸೈನ್ಯ ಪ್ಲಾನ್ ಮಾಡಿದೆ. ಇದಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮುಖ್ಯ. ವೇಗಿ ಖಲೀಲ್ ಅಹಮ್ಮದ್ ಕಳೆದೆರಡು ಪಂದ್ಯದಲ್ಲಿ ದುಬಾರಿಯಾಗಿದ್ದಾರೆ. ಹೀಗಾಗಿ ಖಲೀಲ್ ಅಹಮ್ಮದ್ ಬದಲು ಶಾರ್ದೂಲ್ ಠಾಕೂರ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: 23 ಎಸೆತದಲ್ಲಿ ಅರ್ಧಶತಕ; 100ನೇ ಪಂದ್ಯದಲ್ಲಿ ರೋಹಿತ್ ದಾಖಲೆ!

ಭಾರತ ಸಂಭವನೀಯ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಶಿವಂ ದುಬೆ, ಕ್ರುನಾಲ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ಯಜುವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್

click me!