INDvSA ಪುಣೆ ಟೆಸ್ಟ್; ಇಲ್ಲಿದೆ ಟೀಂ ಇಂಡಿಯಾ ಸಂಭವನೀಯ ತಂಡ!

Published : Oct 09, 2019, 10:04 PM IST
INDvSA ಪುಣೆ ಟೆಸ್ಟ್; ಇಲ್ಲಿದೆ ಟೀಂ ಇಂಡಿಯಾ ಸಂಭವನೀಯ ತಂಡ!

ಸಾರಾಂಶ

ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆಯಾಗುತ್ತಾ? ಯಾರಿಗೆ ಸ್ಥಾನ ಸಿಗಲಿದೆ? ಯಾರಿಗೆ ಕೊಕ್ ನೀಡಲಾಗುತ್ತೆ? ಇಲ್ಲಿದೆ ಭಾರತದ ಸಂಭವನೀಯ ತಂಡ.

ಪುಣೆ(ಅ.09): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೆ ಪುಣೆ ಮೈದಾನ ಸಜ್ಜಾಗಿದೆ. ಅ.10 ರಿಂದ ಆರಂಭಗೊಳ್ಳಲಿರುವ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಕಾತರಗೊಂಡಿದೆ. ಇತ್ತ ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿರುವ ಸೌತ್ ಆಫ್ರಿಕಾ ಕಠಿಣ ಹೋರಾಟ ನೀಡಲು ತಯಾರಿ ಮಾಡಿಕೊಂಡಿದೆ. ಪುಣೆ ಪಿಚ್ ಭಾರತಕ್ಕೆ ಆಘಾತ ನೀಡಿದ ಊದಾಹರಣೆಗಳೂ ಇವೆ. ಹೀಗಾಗಿ ಎಚ್ಚರಿಕೆಯಿಂದ ಕಣಕ್ಕಿಳಿಯಲು ಟೀಂ ಇಂಡಿಯಾ ನಿರ್ಧರಿಸಿದೆ.

ಇದನ್ನೂ ಓದಿ: ಅಶ್ವಿನ್, ಜಡೇಜಾಗೆ ಮೊದಲ ಆದ್ಯತೆ; ವರಸೆ ಬದಲಿಸಿದ ಕೊಹ್ಲಿ!

ಮೊದಲ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2ನೇ ಪಂದ್ಯದಲ್ಲೂ ಗೆಲುವಿಗೆ ರಣತಂತ್ರ ರೂಪಿಸಿದೆ. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ 2ನೇ ಪಂದ್ಯಕ್ಕೆ ಬದಲಾವಣೆ ಮಾಡುತ್ತಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಪುಣೆ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಟೀಂ ಇಂಡಿಯಾ;

ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಹುನಮಾ ವಿಹಾರಿ ವೃದ್ಧಿಮಾನ್ ಸಾಹ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

WPL 2026: ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ಮತ್ತೊಮ್ಮೆ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಲ್ಕನೇ ಬಾರಿ ಹಾರ್ಟ್‌ ಬ್ರೇಕ್!
U19 World Cup: ಟಾಪ್ 07 ರನ್ ಸರದಾರರಲ್ಲಿ ಭಾರತದ ಏಕೈಕ ಆಟಗಾರ! ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?