ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ. ರೋಹಿತ್ ಶರ್ಮಾ, ರಿಷಭ್ ಪಂತ್ ಮತ್ತು ಆಕಾಶ್‌ದೀಪ್ ತಂಡದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಆರಂಭಕ್ಕೆ ಇದೀಗ ಕ್ಷಣಗಣನೆ ಶುರುವಾಗಿದೆ. ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೇಜರ್ ಸರ್ಜರಿಯಾಗಲಿದ್ದು, ಪ್ರಮುಖ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ.
ಹೌದು, ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 4 ಪಂದ್ಯಗಳು ಮುಕ್ತಾಯವಾಗಿದ್ದು, ಆತಿಥೇಯ ಆಸ್ಟ್ರೇಲಿಯಾ ತಂಡವು 2-1ರ ಮುನ್ನಡೆ ಸಾಧಿಸಿದೆ. ಮೆಲ್ಬರ್ನ್ ಟೆಸ್ಟ್ ಪಂದ್ಯದ ಸೋಲು ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಕನಸಿಗೆ ಕೊಳ್ಳಿಯಿಟ್ಟಂತೆ ಆಗಿದೆ. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೇಜರ್ ಸರ್ಜರಿಯಾಗುವುದು ಖಚಿತ ಎನಿಸಿದೆ.
ಆಸೀಸ್ ಎದುರಿನ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಪಕ್ಕಾ; ಘೋಷಣೆಯೊಂದೇ ಬಾಕಿ?
JUST IN
India's selection drama reaches fever pitch just hours out from the SCG Test >> https://t.co/f6enOjaslX pic.twitter.com/NbVWxnWTDJ
ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ್ದ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್, ನಾಳೆ ಪಿಚ್ ಗಮನಿಸಿ ಟಾಸ್ ವೇಳೆಯಲ್ಲಿ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗವನ್ನು ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಇದೀಗ ಕೆಲವು ಮಾಧ್ಯಮಗಳ ವರದಿಯ ಪ್ರಕಾರ ಜನವರಿ 03ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಭಾರತ ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ ಎನ್ನಲಾಗುತ್ತಿದೆ.
1. ರೋಹಿತ್ ಔಟ್-ಗಿಲ್ ಇನ್: ಭಾರತ ತಂಡದ ಅಚ್ಚರಿಯ ಆಯ್ಕೆಯಲ್ಲಿ ಸಿಡ್ನಿ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಶುಭ್‌ಮನ್ ಗಿಲ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳಲಿದ್ದಾರೆ. ಯಶಸ್ವಿ ಜೈಸ್ವಾಲ್ ಹಾಗೂ ಕನ್ನಡಿಗ ಕೆ ಎಲ್ ರಾಹುಲ್ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಆರಂಭಿಕರಾಗಿ ಇನ್ನಿಂಗ್ಸ್ ಶುರು ಮಾಡಲಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ಭಾರತಕ್ಕೆ ಬಿಗ್ ಶಾಕ್! ಸಿಡ್ನಿ ಟೆಸ್ಟ್‌ನಿಂದ ಈ ಕ್ರಿಕೆಟರ್ ಔಟ್!
2. ರಿಷಭ್ ಪಂತ್ ಔಟ್ ದೃವ್ ಜುರೆಲ್ ಇನ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೂಡಾ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ಪದೇ ಪದೇ ಯಡವಿದ್ದಾರೆ. ಹೀಗಾಗಿ ಪಂತ್‌ಗೆ ವಿಶ್ರಾಂತಿ ನೀಡಿ ಮತ್ತೋರ್ವ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ದೃವ್ ಜುರೆಲ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.
3. ಆಕಾಶ್‌ದೀಪ್ ಔಟ್: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾ ವೇಗಿ ಆಕಾಶ್‌ದೀಪ್ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಆಕಾಶ್‌ದೀಪ್ ಈ ಹಿಂದೆ ಬ್ರಿಸ್ಬೇನ್ ಹಾಗೂ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದು 5 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದರು. ಇದೀಗ ಆಕಾಶ್‌ದೀಪ್ ಅನುಪಸ್ಥಿತಿಯಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಇಲ್ಲವೇ ಹರ್ಷಿತ್ ರಾಣಾ ಸಿಡ್ನಿ ಟೆಸ್ಟ್‌ಗೆ ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಇನ್ನು ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಸಿಡ್ನಿ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ:
ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ದೃವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ(ನಾಯಕ), ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.