ನಿಯಮ ಪಾಲಿಸಲು ಆಗಲ್ಲ ಅಂದ್ರೆ ಇಲ್ಲಿಗೆ ಬರಬೇಡಿ; ಟೀಂ ಇಂಡಿಯಾ ಆಟಗಾರರಿಗೆ ಖಡಕ್ ವಾರ್ನಿಂಗ್

Suvarna News   | Asianet News
Published : Jan 03, 2021, 01:31 PM IST
ನಿಯಮ ಪಾಲಿಸಲು ಆಗಲ್ಲ ಅಂದ್ರೆ ಇಲ್ಲಿಗೆ ಬರಬೇಡಿ; ಟೀಂ ಇಂಡಿಯಾ ಆಟಗಾರರಿಗೆ ಖಡಕ್ ವಾರ್ನಿಂಗ್

ಸಾರಾಂಶ

ಕೊರೋನಾ ಕ್ವಾರಂಟೈನ್‌ ನಿಯಮಗಳನ್ನು ಸಡಿಲ ಮಾಡಿ ಎಂದ ಟೀಂ ಇಂಡಿಯಾ ಮನವಿಯನ್ನು ಆಸ್ಟ್ರೇಲಿಯಾ ಸಾರಾಸಗಟಾಗಿ ತಳ್ಳಿ ಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಸಿಡ್ನಿ(ಜ.03): ಕೊರೋನಾ ನಿಯಮ ಉಲ್ಲಂಘಿಸುವುದಾದರೆ ನಮ್ಮಲ್ಲಿಗೆ ಬರಬೇಡಿ ಎಂದು ಕ್ವೀನ್ಸ್‌ಲ್ಯಾಂಡ್‌ ವಿಧಾನಸಭಾ ಸದಸ್ಯೆ ರೋಸ್‌ ಬೇಟ್ಸ್‌ ಟೀಂ ಇಂಡಿಯಾ ಆಟಗಾರರಿಗೆ ಸ್ಪಷ್ಟವಾದ ಎಚ್ಚರಿಕೆ ನೀಡಿದ್ದಾರೆ. ಟೀಂ ಇಂಡಿಯಾ ಆಟಗಾರರು ಬ್ರಿಸ್ಬೇನ್‌ಗೆ ತೆರಳಲು ಹಿಂದೇಟು ಹಾಕಿದ ಬೆನ್ನಲ್ಲೇ ರೋಸ್‌ ಬೇಟ್ಸ್‌ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಹೌದು, ಬ್ರಿಸ್ಬೇನ್‌ನಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಜರುಗಲಿದ್ದು, ಕೊರೋನಾ ಕಾರಣದಿಂದ ಕ್ವಾರಂಟೈನ್ ವಿಚಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಲಾಗಿದೆ. ಈ ಕುರಿತಂತೆ ಟೀಂ ಇಂಡಿಯಾ ಕೆಲ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 

ಈಗ ಆಸ್ಟ್ರೇಲಿಯಾದಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಬಯೋಬಬಲ್ ಒಳಗೆ ನಾವು ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಸದ್ಯ ನಮ್ಮನ್ನು ಸಾಮಾನ್ಯ ಆಸ್ಟ್ರೇಲಿಯಾದವರಂತೆ ಕಾಣಲಿ ಎಂದು ಕೆಲ ಆಟಗಾರರು ಅಭಿಪ್ರಾಯಪಟ್ಟಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ.

ರೋಹಿತ್ ಶರ್ಮಾ ಸೇರಿ ಐವರ ವಿರುದ್ಧ ತನಿಖೆಗೆ ಆದೇಶಿಸಿದ BCCI; ಸಂಕಷ್ಟದಲ್ಲಿ ಟೀಂ ಇಂಡಿಯಾ!

ಈ ಬಗ್ಗೆ ಪ್ರತಿಕ್ರಿಯಿಸಿರುವ ರೋಸ್‌ ಬೇಟ್ಸ್‌ ನೋಡಿ, ನಿಮಗೆ ಇಲ್ಲಿನ ನಿಯಮ ಪಾಲಿಸಲು ಆಗಲ್ಲ ಎಂದರೆ ಇಲ್ಲಿಗೆ ಆಡಲು ಬರಬೇಡಿ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಜಯಿಸಿದ್ದು ಸರಣಿ ಸಮಬಲ ಸಾಧಿಸಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯದಲ್ಲಿ ಜನವರಿ 07ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ