ಭಾರತ-ಇಂಗ್ಲೆಂಡ್ ತವರಿನ ಸರಣಿ ಖಚಿತ ಪಡಿಸಿದ BCCI!

Published : Nov 24, 2020, 09:05 PM IST
ಭಾರತ-ಇಂಗ್ಲೆಂಡ್ ತವರಿನ ಸರಣಿ ಖಚಿತ ಪಡಿಸಿದ BCCI!

ಸಾರಾಂಶ

ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ಟೂರ್ನಿ ನವೆಂಬರ್ 27ರಿಂದ ಆರಂಭಗೊಳ್ಳುತ್ತಿದೆ. ಇದರ ನಡುವೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿ ಖಚಿತ ಪಡಿಸಿದ್ದಾರೆ. ಇಷ್ಟೇ ಅಲ್ಲ ದಿನಾಂಕ ಬಹಿರಂಗ ಪಡಿಸಿದ್ದಾರೆ.  

ಮುಂಬೈ(ನ.24):  ಐಪಿಎಲ್ ಟೂರ್ನಿ ಮುಗಿಸಿ ಆಸ್ಟ್ರೇಲಿಯಾಕ್ಕೆ ಹಾರಿದ ಟೀಂ ಇಂಡಿಯಾ ಕ್ರಿಕೆಟಿಗರು ಕ್ವಾರಂಟೈನ್ ಮುಗಿಸಿ ಟೂರ್ನಿಗೆ ಸಜ್ಜಾಗಿದ್ದಾರೆ. ನವೆಂಬರ್ 27ರಂದು ಇಂಡೋ-ಆಸೀಸ್ ಮೊದಲ ಏಕದಿನ ಪಂದ್ಯ ಆಡಲಿದೆ. ಆಸೀಸ ಟೂರ್ನಿ ಆರಂಭಕ್ಕೂ ಮುನ್ನವೇ ಬಿಸಿಸಿಐ ಭಾರತ-ಇಂಗ್ಲೆಂಡ್ ನಡುವಿನ ಟೂರ್ನಿ ಖಚಿತಪಡಿಸಿದೆ.

ಕೆಲವೇ ಗಂಟೆಗಳಲ್ಲಿ ಇಂಡೋ-ಆಸೀಸ್‌ ಪಂದ್ಯಗಳ ಟಿಕೆಟ್‌ ಸೋಲ್ಡೌಟ್‌..!

ಆಸ್ಟ್ರೇಲಿಯಾ ಪ್ರವಾಸ ಮುಗಿಸಿದ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ.   3 ಏಕದಿನ, 5 ಟಿ20 ಹಾಗೂ 4 ಟೆಸ್ಟ್ ಪಂದ್ಯಗಳ ಸರಣಿ ಆಡುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ. ಆಸೀಸ್ ಪ್ರವಾಸ ಮುಗಿಸಿ ಮರಳಲಿರುವ ಟೀಂ ಇಂಡಿಯಾ, ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ಆಡಲಿದೆ.

4 ಟೆಸ್ಟ್ ಪಂದ್ಯಗಳ ಪೈಕಿ ಒಂದು ಪಂದ್ಯವನ್ನು ಅತೀ ದೊಡ್ಡ ಮೊಟೆರಾ ಕ್ರೀಡಾಂಗಣದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಇಷ್ಟೇ ಅಲ್ಲ ಈ ಪಂದ್ಯ ಡೇ ಅಂಡ್ ನೈಟ್ ಪಂದ್ಯ ಆಯೋಜಿಸಲು ಬಿಸಿಸಿಐ ತಯಾರಿ ಮಾಡಿಕೊಂಡಿದೆ. ಇಷ್ಟೇ ಅಲ್ಲ ಅಭಿಮಾನಿಗಳಿಗೆ ಅವಕಾಶ ನೀಡವು ಕುರಿತು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಿದೆ.

ಇಂಗ್ಲೆಂಡ್ ವೇಲ್ಸ್ ಮಂಡಳಿ ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಭಾರತ ವಿರುದ್ಧ ಸರಣಿ ಆಯೋಜಿಸಿತ್ತು. ಆದರೆ ಕೊರೋನಾ ವೈರಸ್ ಕಾರಣ ಈ ಸರಣಿ ಆಯೋಜನೆ ಸಾಧ್ಯವಾಗಿಲ್ಲ. ಹೀಗಾಗಿ ಇದೀಗ ಬಿಸಿಸಿಐ ತವರಿನಲ್ಲಿ ಸರಣಿ ಆಯೋಜಿಸಿದೆ. ಈಗಾಗಲೇ ಐಪಿಎಲ್ ಟೂರ್ನಿ ಆಯೋಜಿಸಿ ಯಶಸ್ವಿಯಾಗಿರುವ ಬಿಸಿಸಿಐ ಇದೀಗ ತವರಿನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಸರಣಿ ಆಯೋಜಿಸಲು ಸಿದ್ಥತೆ ನಡೆಸುತ್ತಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!